ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ಸಿದ್ಧತೆ

Nagabharana
Published on

ಕಲಬುರಗಿ: ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಲು ಸಂವಿಧಾನ ತಿದ್ದುಪಡಿಗೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಬಿ.ಎಸ್. ಯಡಿಯೂರಪ್ಪ ಒತ್ತಡ ಹೇರಲಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್. ನಾಗಾಭರಣ ಹೇಳಿದರು.

ಯಡಿಯೂರಪ್ಪ ಸೇರಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಂದು ಗೂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಸಂವಿಧಾನ ತಿದ್ದುಪಡಿಗೆ ಪ್ರಯತ್ನ ಆರಂಭಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕಲಿಕಾ ಮಾಧ್ಯಮ ಪಾಲಕರ ಆಯ್ಕೆಗೆ ಬಿಟ್ಟಿದ್ದು ಎಂಬ ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದು, ಪಾಲಕರೂ ಸಹ ಇಂಗ್ಲಿಷ್ ಕಡೆಗೆ ಒಲವು ತೋರುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಅವಕಾಶ ಇಲ್ಲದ್ದರಿಂದ ಸಂವಿಧಾನ ತಿದ್ದುಪಡಿ ಅನಿವಾರ್ಯ. ಈ ವಿಷಯದಲ್ಲಿ ಇತರ ರಾಜ್ಯಗಳ ಸಿಎಂಗಳ ಜತೆ ಯಡಿಯೂರಪ್ಪ ರ್ಚಚಿಸಲು ಮುಂದಾಗಿದ್ದು, ಶೀಘ್ರವೇ ಉತ್ತಮ ನಿರ್ಧಾರ ಹೊರಬರಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net