

ಮುಂಡಗೋಡ: ಪಟ್ಟಣದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆಗೆ ತಾಲೂಕಾಸ್ಪತ್ರೆ ಸಿದ್ಧತೆ ನಡೆಸಿದೆ.
ಆರೋಗ್ಯ ಕ್ಷೇತ್ರದ ಬಲವರ್ಧನೆಗಾಗಿ 15ನೇ ಹಣಕಾಸು ಆಯೋಗವು ರಾಜ್ಯದ ನಗರ, ಸ್ಥಳಿಯ ಸಂಸ್ಥೆಗಳ ಮೂಲಕ ಆರೋಗ್ಯ ಕ್ಷೇತ್ರದ ನಿರ್ದಿಷ್ಟ ಚಟುವಟಿಕೆಗಳಿಗೆ ಅನುದಾನ ಶಿಫಾರಸು ಮಾಡಿ ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಆರಂಭಿಸಲು ಸರ್ಕಾರ ಸೂಚಿಸಿತ್ತು.
ಎರಡು ವರ್ಷಗಳ ಹಿಂದೆ ಪಟ್ಟಣದ ಗಾಂಧಿನಗರದ ಅಂಬೇಡ್ಕರ್ ಭವನದಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲು ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಟ್ಟಣ ಪಂಚಾಯಿತಿಯವರು ಸಿದ್ಧತೆ ಮಾಡಿದ್ದರು. ಆದರೆ, ನಾನಾ ಕಾರಣಗಳಿಂದ ಮುಂದಕ್ಕೆ ಹೋಗಿತ್ತು.
ಈಗ ನಮ್ಮ ಕ್ಲಿನಿಕ್ ಆರಂಭಿಸುತ್ತಿದ್ದು, ಒಬ್ಬ ವೈದ್ಯ ಹಾಗೂ ಸಿಬ್ಬಂದಿ ಸೇವೆ ಸಲ್ಲಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಯಲ್ಲಾಪುರ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ, ‘ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ನಮ್ಮ ಕ್ಲಿನಿಕ್ ಉದ್ಘಾಟನೆ ವಿಳಂಬವಾಗಿದೆ. ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕಿನ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಶೀಘ್ರದಲ್ಲಿ ನಮ್ಮ ಕ್ಲಿನಿಕ್ ಆರಂಭವಾಗಲಿದೆ’ ಎಂದರು.