ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ

26-KGL-1,,,,,,
ಪ್ರವಾಹ ಮುನ್ನೆಚರಿಕೆ ಹಿನ್ನೆಲೆ ಕಾಳಜಿ ಕೇಂದ್ರ ತೆರೆಯಲು ತಹಸೀಲ್ದಾರ್ ಬಸವರಾಜು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಸಿದರು.
Published on

ಕೊಳ್ಳೇಗಾಲ: ಪ್ರವಾಹ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದ್ದು, ನೆರೆ ಬಂದರೆ ಜನರ ವಾಸ್ತವ್ಯಕ್ಕೆ ಕಾಳಜಿ ಕೇಂದ್ರ ತೆರೆಯಲು ತಾಲೂಕು ಆಡಳಿತ ಮುಂದಾಗಿದೆ.

ಪಟ್ಟಣದ ಶಿವಕುಮಾರಸ್ವಾಮಿ ಬಡಾವಣೆ ಸಮೀಪದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಮಹದೇಶ್ವರ ಕಾಲೇಜು ಹಿಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ನಿಲಯ, ಪರಿಶಿಷ್ಟ ವರ್ಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ, ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ನಡೆಯುತ್ತಿದೆ.

2024ರಲ್ಲಿ ನೆರೆ ಸಂಭವಿಸಿದಾಗ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದ ಗ್ರಾಮಗಳ ಜನರನ್ನು ಈ ವಿದ್ಯಾರ್ಥಿ ನಿಲಯಗಳಿಗೆ ಕರೆತಂದು ವಸತಿ ಹಾಗೂ ಊಟದ ಸೌಕರ್ಯ ಕಲ್ಪಿಸಲಾಗಿತ್ತು. ಅದರಂತೆ ಈ ವರ್ಷವೂ ಪ್ರವಾಹ ಪರಿಸ್ಥಿತಿ ಇರುವುದರಿಂದ ಜಿಲ್ಲಾಡಳಿತ ನಿರ್ದೇಶನದಂತೆ ತಹಸೀಲ್ದಾರ್ ಬಸವರಾಜು ಗುರುವಾರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ಕಾಳಜಿ ಕೇಂದ್ರಕ್ಕೆ ಏನೆಲ್ಲ ಕ್ರಮ ವಹಿಸಬೇಕೆಂಬ ಬಗ್ಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ

ಈ ಬಗ್ಗೆ ವಿಜಯವಾಣಿಯೊಂದಿಗೆ ತಹಸೀಲ್ದಾರ್ ಬಸವರಾಜು ಮಾತನಾಡಿ, ಕಾವೇರಿ ಜಲಾಯನ ಪ್ರದೇಶದಲ್ಲಿ ಆಗುತ್ತಿರುವ ವ್ಯಾಪಕ ಮಳೆಯಿಂದ ಕೆಆರ್‌ಎಸ್ ಹಾಗೂ ಕಬಿನಿ ಅಣೆಕಟ್ಟುಗಳಿಂದ ಹೊಳಹರಿವು ಹೆಚ್ಚಾಗಿದ್ದು, ಸುಮಾರು 2 ಜಲಾಶಯದಿಂದ 70 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಸದ್ಯಕ್ಕೆ ಪ್ರವಾಹದ ಆತಂಕ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ವಿವಿಧ ಇಲಾಖೆ ಅಧಿಕಾರಿಗಳು ಪ್ರವಾಹ ನಿರ್ವಹಣೆ ಸಂಬಂಧಿತ ಜವಾಬ್ದಾರಿ ನಿಭಾಹಿಸುತ್ತಿದ್ದಾರೆ. ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ನದಿಗೆ ನೀರು ಬಿಡುವ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net