ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮೈಸೂರಿನ ಅಭಿವೃದ್ಧಿ ಹಿತದೃಷ್ಟಿಯಿಂದ ಬಜೆಟ್ ಮಂಡಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ರಫತ್ ಖಾನ್ ಮನವಿ ಮಾಡಿದರು.
ಮೈಸೂರಿನವರೇ ಆಗಿರುವುದು ಸಿದ್ದರಾಮಯ್ಯ ತವರು ಪ್ರೀತಿ ತೋರುತ್ತಾರೆ ಎನ್ನುವ ವಿಶ್ವಾಸವಿದೆ. ಈ ಮೂಲಕ ನಗರ ಜಿಲ್ಲೆಯ ಶಾಶ್ವತ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ಈ ಬಜೆಟ್‌ನಲ್ಲಿ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿ, ಈ ಹಿಂದೆ ಇದಕ್ಕಾಗಿ ಘೋಷಿಸಿದ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯವಾದ ಅನುದಾನ ನೀಡಬೇಕು. ಚಿತ್ರನಗರಿ ಹಾಗೂ ಕರಕುಶಲ ಕರ್ಮಿಗಳಿಗೆ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಬೇಕು. ಸಂರಕ್ಷಿತ ಅರಣ್ಯ ಪ್ರದೇಶಗಳಾದ ನಾಗರಹೊಳೆ, ಬಂಡಿಪುರ, ಚಾಮುಂಡಿಬೆಟ್ಟ ಮೊದಲಾದವುಗಳನ್ನು ಸಂರಕ್ಷಿಸಿ, ವಿಶೇಷ ಕಾರ್ಯಪಡೆ ರಚಿಸಬೇಕು ಎಂದು ಕೋರಿದರು.
ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಮುಖಂಡ ತಬ್ರೇಜ್ ಇತರರು ಇದ್ದರು.