ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸಿ

sdpi
Published on

ಮಡಿಕೇರಿ: ರಾಜ್ಯ ಬಜೆಟ್‌ನಲ್ಲಿ ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸುವಂತೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ ಆಗ್ರಹಿಸಿದರು.

ಮಡಿಕೇರಿಯ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲೆಯ ಜನತಾ ಬಜೆಟ್-೨೦೨೫ ಎಂಬ ಹಕ್ಕೊತ್ತಾಯಗಳ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸರ್ಕಾರ ದಿವಾಳಿಯಾಗುತ್ತಿದೆ. ವಿಶ್ವವಿದ್ಯಾನಿಲಯಗಳ ನಿರ್ವಹಣೆಗೆ ಅನುದಾನ ಒದಗಿಸಲು ಸಾಧ್ಯವಾಗದಷ್ಟು ಅಸಹಾಯಕ ಸ್ಥಿತಿಗೆ ತಲುಪಿದೆ. ಕೊಡಗು ವಿವಿಯನ್ನು ಮುಚ್ಚಿದರೆ, ಅದು ಜಿಲ್ಲೆಯ ಜನತೆಗೆ ಮಾಡುವ ದೊಡ್ಡ ಅನ್ಯಾಯವಾಗಲಿದೆ. ಸರ್ಕಾರಕ್ಕೆ ದೂರದೃಷ್ಠಿಯ ಚಿಂತನೆ ಇಲ್ಲ. ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿಯಿಲ್ಲ. ಯುವ ಪೀಳಿಗೆಯನ್ನು ಅನಕ್ಷರಸ್ಥರಾಗಿಸಲು ಹೊರಟಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ ಅವರು, ಕೊಡಗಿನ ಸಮಗ್ರ ಅಭಿವೃದ್ಧಿಗೆ ಆಧ್ಯತೆ ನೀಡುವ ಜೊತೆಗೆ ಜನಪರವಾದ ಜನತಾ ಬಜೆಟ್ ಮಂಡಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಮನ್ಸೂರ್ ಆಲಿ, ಎಸ್‌ಡಿಪಿಐ ಪ್ರದಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ, ಕಾರ್ಯದರ್ಶಿ ಬಶೀರ್, ಸದಸ್ಯರಾದ ಅಬ್ದುಲ್ ಅಡ್ಕರ್, ಮೇರಿ ವೇಗಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net