ಸದಾಶಿವ ಆಯೋಗದ ವರದಿ ಮಂಡಿಸಿ

29-11-Shiva-1
ಬೆಳಗಾವಿಯ ಚಳಿಗಾಲದ ಅವೇಶನದಲ್ಲಿ ಸದಾಶಿವ ಮತ್ತು ಕಾಂತರಾಜ ಆಯೋಗದ ವರದಿಯನ್ನು ಮಂಡಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು. ಸಮಿತಿ ವಿಭಾಗೀಯ ಅಧ್ಯಕ್ಷ ಬಸವರಾಜ ಸಾಸಲಮರಿ, ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ, ಪದಾಕಾರಿಗಳಾದ ಬಸವರಾಜ ನಾಡಂಗಿ, ಎಂ.ಮನೋಹರ ಸಿರವಾರ, ರಂಗಪ್ಪ ಕೋತಿಗುಡ್ಡ, ಜಯರಾಜ್ ಇದ್ದರು.
Published on

ರಾಯಚೂರು: ಬೆಳಗಾವಿಯಲ್ಲಿ ನಡೆಯಲಿರುವ ಅವೇಶನದಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗ, ಕಾಂತರಾಜ ಆಯೋಗ ಮತ್ತು ನಾಗಮೋಹನ್‌ದಾಸ್ ವರದಿಯನ್ನು ಮಂಡಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕಾಂತರಾಜ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿ ಅಂಗೀಕರಿಸುವ ಮೂಲಕ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡಿ ಸಂವಿಧಾನದ ಷೆಡ್ಯೂಲ್ 9 ರಲ್ಲಿ ಸೇರಿಸಬೇಕು. ಮೀಸಲಾತಿ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಿಸಬೇಕು. ಸುಪ್ರೀಂ ಕೋರ್ಟ್‌ನಲ್ಲಿರುವ ದ್ವಿಸದಸ್ಯ ಪೀಠದಲ್ಲಿರುವ ವಿವಿಧ ರಾಜ್ಯಗಳ ಒಳ ಮೀಸಲಾತಿ ಪ್ರಕರಣಗಳ ಪರವಾಗಿ ಕೇಂದ್ರ ವಾದ ಮಂಡಿಸಿ ಮೀಸಲಾತಿ ವರ್ಗೀಕರಿಸಬೇಕು.
ಕೇಂದ್ರ ಸರ್ಕಾರದ ಚಳಿಗಾಲದ ಅವೇಶನದಲ್ಲಿ ಉಷಾ ಮೇತ್ರ ಸಮಿತಿ ನೀಡಿರುವ ವರದಿಯಂತೆ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ಮಾಡಿ ಸಂವಿಧಾನದ ಷೆಡ್ಯೂಲ್ 9ರಲ್ಲಿ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಮಿತಿ ವಿಭಾಗೀಯ ಅಧ್ಯಕ್ಷ ಬಸವರಾಜ ಸಾಸಲಮರಿ, ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ, ಪದಾಕಾರಿಗಳಾದ ಬಸವರಾಜ ನಾಡಂಗಿ, ಎಂ.ಮನೋಹರ ಸಿರವಾರ, ರಂಗಪ್ಪ ಕೋತಿಗುಡ್ಡ, ಜಯರಾಜ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net