

ವಿಜಯವಾಣಿ ಸುದ್ದಿಜಾಲ ಕಾರ್ಕಳ
ಭವಿಷ್ಯದ ದೃಷ್ಟಿಯಿಂದ ಹೊಸ ಶಿಕ್ಷಣ ಪದ್ದತಿಗೂ ಒತ್ತು ನೀಡಬೇಕು. ವಿಶ್ವಕ್ಕೆ ಭಾರತೀಯ ಶಿಕ್ಷಣ ಮಾದರಿ ಎಂದು ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ. ಅನಿಲ್ ಸಹಸ್ರಬುದ್ದೆ ಹೇಳಿದರು.
ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾಲಯ ವಿಭಾಗದ ವತಿಯಿಂದ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ 2014ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು.ತುಮಕೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಸುವೃತ್ ಕುಮಾರ್, ಭುವನೆಂದ್ರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ, ಡಾ. ಗುರುನಾಥ್ ಬಡಿಗೇರ್, ಮೋಹನ್ ಪಡಿವಾಳ್ ಉಪಸ್ಥಿತರಿದ್ದರು. ಡಾ.ಮಾಧವ ಎಂ.ಕೆ ಪ್ರಶಸ್ತಿ ಪುರಸ್ಕೃತರ ಪರಿಚಯಿಸಿದರು. ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ವಾಣಿ ವಂದಿಸಿದರು. ವಾಣಿ ಯು.ಎಸ್ ಸಹಕರಿಸಿದರು.
ಜೀವಮಾನದ ಸಾಧನೆಗಾಗಿ ಮಂಗಳೂರಿನ ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್, ಶಿಕ್ಷಣ ತಜ್ಞ ಡಾ.ಶಂಕರ್ ರಾವ್, ಪ್ರಾಂಶುಪಾಲರಾದ ಡಾ. ಜಗದೀಶ್ ಬಾಳ, ಡಾ.ಬಿ.ಎ ಕುಮಾರ ಹೆಗ್ಡೆ, ಪ್ರೊ. ವಿಶಾಲಾಕ್ಷಿ ಬಿ, ಡಾ. ಮಂಜುನಾಥ್ ಕೋಟ್ಯಾನ್, ಡಾ. ಆನಂದ ಕಾರ್ಲ, ಡಾ.ವಾಸಪ್ಪ ಗೌಡ, ಕೆ. ಶಂಕರನಾರಾಯಣ ಕುಂದಾಪುರ ಅವರಿಗೆ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷ ಡಾ.ರಘು ಅಕ್ಕಮಂಚಿ ಅವರನ್ನು ಸನ್ಮಾನಿಸಲಾಯಿತು. 2024ನೇ ಸಾಲಿನಲ್ಲಿ ಪಿಎಚ್.ಡಿ ಪದವಿ ಪಡೆದ ಸಂಶೋಧನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.