ಭಾರತೀಯ ಪರಂಪರೆ ರಕ್ಷಣೆ ಎಲ್ಲರ ಜವಾಬ್ದಾರಿ

Published on

ಹುಬ್ಬಳ್ಳಿ : ಭಾರತೀಯ ಸಂಸ್ಕೃತಿ, ಸಂಸ್ಕಾರ, ಧಾರ್ವಿುಕ ಪರಂಪರೆ ಉಳಿಸಿ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಶರನ್ನವರಾತ್ರಿ ಅಂಗವಾಗಿ ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಳೆದ ಹತ್ತಾರು ವರ್ಷಗಳಿಂದ ರಾಮಕೃಷ ¡ವಿವೇಕಾನಂದ ಆಶ್ರಮವು ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಧಾರ್ವಿುಕ ಭಾವನೆಗಳನ್ನು ಬಿತ್ತುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ರಾಮಕೃಷ್ಣ ವಿವೇಕಾನಂದ ಆಶ್ರಮದ ಕಟ್ಟಡ ಕಾಮಗಾರಿಗೆ ಶಾಸಕರ ಅನುದಾನದಲ್ಲಿ 10 ಲಕ್ಷ ರೂ. ನೀಡುವುದಾಗಿ ಘೋಷಿಸಿದರು.

ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ, ಪಾಲಿಕೆ ಸದಸ್ಯ ಉಮೇಶಗೌಡ ಕೌಜಗೇರಿ, ಸ್ವಾಮಿ ಗೀರಿವಾನಂದ ಮಹಾರಾಜ, ಉತ್ತರ ಕರ್ನಾಟಕ ಸಕ್ಷಮದ ಅಧ್ಯಕ್ಷ ಡಾ. ಸುನೀಲ ಗೋಖಲೆ, ಆಶ್ರಮದ ಧರ್ಮದರ್ಶಿ ಸಂಭಾಜಿ ಕಲಾಲ, ಪ್ರಿಯಾ ಕಲಾಲ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿ ಕಾರ್ಯದರ್ಶಿ ಡಾ. ಸುರೇಶ ಹೊರಕೇರಿ, ದಯಾನಂದರಾವ್, ಡಾ. ನಾಗಲಿಂಗ ಮುರಗಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net