

ಹುಬ್ಬಳ್ಳಿ: ಭಾರತ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯ ಕೊಡಮಾಡುವ ಮೈ ಭಾರತ ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರಪತಿ ಪ್ರಶಸ್ತಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಸ್ವಯಂ ಸೇವಕ ಸಂಜಯಕುಮಾರ ಬಿರಾದಾರ ಅವರಿಗೆ ನೀಡಿ ಗೌರವಿಸಲಾಗಿದೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂಜಯಕುಮಾರಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ಒಂದು ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ.
ಮೂಲತಃ ವಿಜಯಪುರ ಜಿಲ್ಲೆಯ ತೆಲಗಿ ಗ್ರಾಮದ ಸಂಜಯಕುಮಾರ ಅವರು ಕೈಗೊಂಡ ರಕ್ತದಾನ, ಸಸಿ ನೆಡುವ ಕಾರ್ಯಕ್ರಮ, ಬಡ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಕೇಂದ್ರ ಪುರಸತ ಯೋಜನೆಗಳ ಜಾಗೃತಿ ಮುಂತಾದ ಸೇವಾ ಕಾರ್ಯಗಳಿಗಾಗಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಸಂಜಯಕುಮಾರ ಈ ಹಿಂದೆ ಕಾಮನ್ವೆಲ್ತ್ ಯೂಥ್ ಕ್ಲೆಮೇಟ್ ಚೇಂಜ್ ನೆಟವರ್ಕ್ ಇಂಡಿಯಾದ ಯೂಥ್ ಲೀಡರ್ ಆಗಿ ನೇಮಕಗೊಂಡಿದ್ದರು.