ಸಾಂಸ್ಕೃತಿಕ ನಗರಿ ಮೈಸೂರಿಗೆ 'ರಾಷ್ಟ್ರಪತಿ ದ್ರೌಪದಿ ಮುರ್ಮು' ಆಗಮನ; ಹೂಗುಚ್ಛ ನೀಡಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ| mysuru

cm murmu
Published on

ಮೈಸೂರು : ನಗರದಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಸೆ.01) ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು.

ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ಅಲ್ಲಿಂದ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು.

ರಾಷ್ಟ್ರಪತಿ ಅವರು ತೆರಳುವ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಮಧ್ಯಾಹ್ನದ ಬಳಿಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಜನರ ಓಡಾಟಕ್ಕೂ ನಿರ್ಭಂಧಿಸಲಾಗಿದೆ. ನಗರದಲ್ಲಿ ಸುರಿಯುತ್ತಿರುವ ಮಳೆಯ ನಡುವೆಯೇ ಪೊಲೀಸರು ಭದ್ರತೆ ಒದಗಿಸುತ್ತಿದ್ದಾರೆ. ಸಮಾರಂಭದ ಬಳಿಕ ರಾಷ್ಟ್ರಪತಿ ರ‍್ಯಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿದ್ದಾರೆ. ನಂತರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net