ಜಿಪಂ ಸಿಇಒ ಭೇಟಿ ಮಾಡಿದ ಕೂಡುಮಂಗಳೂರು ಗ್ರಾಪಂ ಅಧ್ಯಕ್ಷ

06Kush02
ಕೂಡುಮಂಗಳೂರು ಗ್ರಾಪಂ ಅಧ್ಯಕ್ಷ ಬಾಸ್ಕರ್ ನಾಯಕ್ ಜಿಪಂ ಸಿಇಒ ಅವರೊಂದಿಗೆ ಚರ್ಚೆ ನಡೆಸುತ್ತಿರುವುದು.
Published on

ಕುಶಾಲನಗರ: ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರನ್ನು ಮಂಗಳವಾರ ಕಚೇರಿಯಲ್ಲಿ ಭೇಟಿ ಮಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಹಲವು ಸಮಸ್ಯೆಗಳ ಕುರಿತು ಚರ್ಚಿಸಿದರಲ್ಲದೆ, ಸಮಸ್ಯೆ ಬಗೆಹರಿಸಲು ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಭಾಸ್ಕರ್ ನಾಯಕ್, ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ವಿಚಾರದಲ್ಲಿ ಗ್ರಾಮ ಪಂಚಾಯಿತಿ ಮಾಡಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆದಿದ್ದೇನೆ. ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕಾಗಿ ಮೀಸಲಿಟ್ಟಿರುವ ಕೃಷಿ ಇಲಾಖೆ ಜಾಗಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗಿದ್ದು, ಸಿಇಒ ವರ್ಣಿತ್ ನೇಗಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net