

ಮಂಡ್ಯ: ಮೈಷುಗರ್ ಕಾರ್ಖಾನೆಗೆ ಅಧ್ಯಕ್ಷ ಸಿ.ಡಿ.ಗಂಗಾಧರ ದಿಢೀರ್ ಭೇಟಿ ನೀಡಿ ಕಬ್ಬು ಅರೆಯುವಿಕೆ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಈ ವೇಳೆ ಎಲೆಕ್ಟ್ರಿಕಲ್ ಹಾಗೂ ಬಾಯ್ಲಿಂಗ್ ವಿಭಾಗದ ಐವರು ಸಿಬ್ಬಂದಿ ಅನಧಿಕೃತವಾಗಿ ಗೈರಾಗಿದ್ದು ಕಂಡುಬಂತು.
ಸಿ.ಡಿ.ಗಂಗಾಧರ ಅಂದು ರಾತ್ರಿ 10ಗಂಟೆಯಲ್ಲಿ ಕಾರ್ಖಾನೆಗೆ ಭೇಟಿ ನೀಡಿದರು. ಮಾತ್ರವಲ್ಲದೆ ಮಧ್ಯರಾತ್ರಿ 1ಗಂಟೆವರೆಗೂ ವಿಭಾಗವಾರು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಮಯದಲ್ಲಿ ಕಬ್ಬು ಅರೆಯುವಿಕೆ ವಿಭಾಗಕ್ಕೆ ಸಂಬಂಧಿಸಿದಂತೆ 10ಕ್ಕೂ ಹೆಚ್ಚು ತಾಂತ್ರಿಕ ಸಿಬ್ಬಂದಿ ಅವಶ್ಯಕತೆ ಇರುವುದು ಕಂಡುಬಂತು. ಈ ಹಿನ್ನೆಲೆಯಲ್ಲಿ ಟೆಂಡರ್‌ದಾರರ ಆರ್‌ಬಿ ಟೆಕ್ಟ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು. ತ್ವರಿತವಾಗಿ ತಾಂತ್ರಿಕ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಮುಖ್ಯವಾಗಿ ಯಾವುದೇ ಸಿಬ್ಬಂದಿ ಅನಧಿಕೃತವಾಗಿ ಗೈರಾಗದಂತೆ ನೋಡಿಕೊಳ್ಳಬೇಕು. ಒಟ್ಟಾರೆ ಕಬ್ಬು ಅರೆಯುವಿಕೆ ಪ್ರಕ್ರಿಯೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.
ಮೈಷುಗರ್ ಡೆಪ್ಯೂಟಿ ಸಿಇ ಶಿವಶಂಕರ್, ಎಲೆಕ್ಟ್ರಿಕಲ್ ಇಂಜಿನಿಯರ್ ಆನಂದ್‌ಕುಮಾರ್, ಕೋಜನ್ ನಿರ್ವಹಣೆ ವಿಭಾಗದ ಮುಖ್ಯಸ್ಥ ಮಹೇಂದ್ರ, ತಾಂತ್ರಿಕ ಪ್ರಧಾನ ವ್ಯವಸ್ಥಾಪಕ ಅಪ್ಪಾ ಸಾಹೇಬ್ ಪಾಟೀಲ್, ಪಾಪಣ್ಣ ಇತರರಿದ್ದರು.