

ಬೆಂಗಳೂರು ಗ್ರಾಮಾಂತರ: ರಾಜ್ಯ ಅಲ್ಪಸಂಖ್ಯಾತರ ಆಯೋಗದ ರಾಜ್ಯಾಧ್ಯಕ್ಷ ಯು. ನಿಸಾರ್ ಅಹಮದ್ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯ ನಂತರ ಮಾತನಾಡಿ, ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ವಂಚಿತರಾಗಬಾರದು ಸಮರ್ಪಕ ಶೈಕ್ಷಣಿಕ ಸೌಲಭ್ಯ ಸಿಗುವಂತಾಗಬೇಕು, ಆರ್ಥಿಕ ಚಟುವಟಿಕೆಗಳು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಕೌಶಲ ತರಬೇತಿ, ವಿವಿಧ ಸಾಲ ಸೌಲಭ್ಯ ಮತ್ತು ಸಹಾಯಧನ ಸವಲತ್ತುಗಳನ್ನು ಅರ್ಹರಿಗೆ ಕಲ್ಪಿಸಬೇಕು.ವಸತಿ, ನಿವೇಶನ ಒದಗಿಸುವುದು ಸೇರಿದಂತೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಎಲ್ಲಾ ಇಲಾಖೆಗಳ ಸಮನ್ವಯತೆ ಮತ್ತು ಸಹಕಾರದಿಂದ ಅರ್ಹರಿಗೆ ಸೌಲಭ್ಯ ಸಿಗಲು ಸಾಧ್ಯ ಎಂದು ಹೇಳಿದರು.