ಮೂವರು ಪತ್ರಕರ್ತರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ

pres club award
Published on

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಮೂವರು ಪತ್ರಕರ್ತರು ಭಾಜನರಾಗಿದ್ದಾರೆ ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ.ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹಿರಿಯ ಪತ್ರಕರ್ತ ಕೆ.ಬಿ.ಮಹಂತೇಶ್ ಅವರ ಸ್ಮರಣಾರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಏಜೆಂಟರ ಮೋಸಕ್ಕೆ ಬಲಿಯಾಗಿ ವಿದೇಶದಲ್ಲಿ ಸಿಲುಕಿದ ಮಹಿಳೆ ಎಂಬ ವರದಿಗೆ ಎ.ಎನ್.ವಾಸು ಪಡೆದುಕೊಂಡಿದ್ದಾರೆ. ಕೋವರ್ ಕೊಲ್ಲಿ ಇಂದ್ರೇಶ್ ಮತ್ತು ಕುಟುಂಬವರ್ಗ ತಮ್ಮ ತಂದೆ ಬಿ.ವಿ.ಚಂದ್ರಶೇಖರ್ ಹಾಗೂ ತಾಯಿ ಪುಷ್ಪಲತಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಸ್ಟಾರ್ ಆಫ್ ಮೈಸೂರು ಪತ್ರಿಕೆಯಲ್ಲಿ ಪ್ರಕಟವಾದ Daredevil act by kodagu born vet saves leopard in mangaluru ಎಂಬ ವರದಿಗೆ ಪಿ.ವಿ.ಅಕ್ಷಯ್ ಪಡೆದುಕೊಂಡಿದ್ದಾರೆ.


ಎಂ.ಎನ್.ಚಂದ್ರಮೋಹನ್ ಅವರು ತಮ್ಮ ತಂದೆ ಎಂ.ನಾರಾಯಣ ಹಾಗೂ ತಾಯಿ ಎನ್.ಪದ್ಮಾವತಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ವರದಿ ಪ್ರಶಸ್ತಿಗೆ ಟಿ.ವಿ 9 ವಾಹಿನಿಯಲ್ಲಿ ಪ್ರಕಟವಾದ ಮಡಿಕೇರಿಯಲ್ಲಿ ಮರಗಳ ಮಾರಣ ಹೋಮ ಎಂಬ ವರದಿಗೆ ಐಮಂಡ ಗೋಪಾಲ್ ಸೋಮಯ್ಯ ಪಡೆದುಕೊಂಡಿದ್ದಾರೆ.


ಮೂರು ಪ್ರಶಸ್ತಿಯು ತಲಾ ೫ ಸಾವಿರ ರೂಪಾಯಿ ನಗದು ಹಾಗೂ ಫಲಕ ಒಳಗೊಂಡಿದೆ. ಜೂ೨ ರಂದು ಮಧ್ಯಾಹ್ನ ೧೨ ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕೆ.ಕೆ.ರೆಜಿತ್ ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net