ಜೂ.೨ ರಂದು ಪ್ರೆಸ್ ಕ್ಲಬ್ ಮಹಾಸಭೆ

Logo
Published on

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ೨೦೨೩-೨೪ನೇ ಸಾಲಿನ ಮಹಾಸಭೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಜೂ.೨ ರಂದು ನಗರದ ಪತ್ರಿಕಾಭವನದಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೂ.೨ ರಂದು ಬೆಳಗ್ಗೆ ೧೦.೩೦ ಗಂಟೆಗೆ ಪ್ರೆಸ್ ಕ್ಲಬ್ ವಾರ್ಷಿಕ ಮಹಾಸಭೆ ನಡೆಯಲಿದೆ. ೧೨ ಗಂಟೆಗೆ ವಾರ್ಷಿಕ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.


ಸ್ಮರಣಸಂಚಿಕೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ನಾಪಂಡ ಮುದ್ದಪ್ಪ, ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ, ಮಹಾಪೋಷಕ ಜಿ.ರಾಜೇಂದ್ರ, ಗೌರವ ಅಧ್ಯಕ್ಷ ಬಿ.ಆರ್.ಸವಿತಾ ರೈ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net