ಬಸವೇಶ್ವರರ ಭಾವಚಿತ್ರ ಅಳವಡಿಸದೇ ನಿರ್ಲಕ್ಷ್ಯ: ಲಿಂಗಾಯತ ಮಹಾಸಭಾ ಬಸವ ತತ್ವಗಳ ಜನಜಾಗೃತಿ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಕ್ರೋಶ

Press conference against district administration mandya
Published on

ಮಂಡ್ಯ: ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರವನ್ನು ಅಳವಡಿಸುವಂತೆ ಆದೇಶ ನೀಡಿದೆ. ಆದರೆ, ಜಿಲ್ಲಾಡಳಿತ ಸರ್ಕಾರದ ಆದೇಶವನ್ನು ಉಲ್ಲಂಘಿಸಿದೆ ಎಂದು ಲಿಂಗಾಯತ ಮಹಾಸಭಾ ಬಸವ ತತ್ವಗಳ ಜನಜಾಗೃತಿ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಪಾದಿಸಿದರು.

ಸರ್ಕಾರದ ಆದೇಶವನ್ನು ಪಾಲಿಸಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರವನ್ನು ಅಳವಡಿಸಬೇಕು. ಬಸವ ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಬೇಕು ಎಂದು ಜಿಲ್ಲಾಡಳಿತವನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ತಿಪಟೂರಿನಲ್ಲಿ ಬಸವಣ್ಣನವರ ಪುತ್ಥಳಿಯನ್ನು ತೆರವು ಮಾಡಿರುವ ಕ್ರಮ ಖಂಡನೀಯ. ಈ ಬಗ್ಗೆ ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಅದೇ ಸ್ಥಳದಲ್ಲಿ ಪುತ್ತಳಿ ನಿರ್ಮಿಸುವಂತೆ ಆಗ್ರಹಪಡಿಸಲಾಗುವುದು ಎಂದು ತಿಳಿಸಿದರು.

ಯೋಗ ಗುರು ಎಚ್.ವಿ.ಶಿವರುದ್ರಸ್ವಾಮಿ, ಸಿ.ಮಾದಪ್ಪ, ಗೌರಿಶಂಕರ್, ಬೆಳ್ಳಪ್ಪ, ನಂದೀಶ್, ಚುಂಚಯ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net