ಜಿಲ್ಲೆಯಲ್ಲಿ ಪ್ರಕೃತಿ ಚಿಕಿತ್ಸಾ ಪ್ರಾರಂಭಿಸಲಿ: ರಾಷ್ಟ್ರೀಯ ಅಹಿಂದ ಸಂಘಟನೆಗಳ ಹೋರಾಟ ಸಮಿತಿ ಅಧ್ಯಕ್ಷ ಎಂ.ನಿಂಗಯ್ಯ ಒತ್ತಾಯ

Press conference of the Non-Hind Organizations Struggle Committee Mandya
Published on

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ವಿಭಾಗ ಆರಂಭಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಗಳ ಹೋರಾಟ ಸಮಿತಿ ಅಧ್ಯಕ್ಷ ಎಂ.ನಿಂಗಯ್ಯ ಒತ್ತಾಯಿಸಿದರು.

ಜಿಲ್ಲೆಯಲ್ಲಿ 15 ಲಕ್ಷಕ್ಕೂ ಹೆಚ್ಚು ಜನರ ಆರೋಗ್ಯದ ದೃಷ್ಠಿಯಿಂದ ಹೊರಗೆ ಅವಲಂಬಿತವಾಗಿರುವ ಅಗತ್ಯ ಆರೋಗ್ಯ ಕೇಂದ್ರಗಳನ್ನು ತೆರೆಯಲು ಸರ್ಕಾರ ಜವಾಬ್ದಾರಿ ತೋರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಬೆಂಗಳೂರಿನ ನಿಮಾನ್ಸ್ ಮಾದರಿ ಆಸ್ಪತ್ರೆಯನ್ನು ಪ್ರಸಕ್ತ ಸಾಲಿನ ಅಂತ್ಯದೊಳಗೆ ಜಿಲ್ಲೆಯಲ್ಲಿ ತೆರೆಯಬೇಕು. ಅಂತೆಯೇ ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯಡಿ ರಾಜ್ಯದ 2ನೇ ಸರ್ಕಾರಿ ಪ್ರಕೃತಿ ಚಿಕಿತ್ಸಾ ಕೇಂದ್ರ ಹಾಗೂ ಕಾಲೇಜನ್ನು ಮಂಡ್ಯದಲ್ಲಿ ಆರಂಭಿಸುವಂತೆ ಒತ್ತಾಯಿಸಿದರು.

ರಮಾನಂದ, ವಿಶ್ವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net