

ಮಂಡ್ಯ: ದಿವಂಗತ ನಟ ಡಾ.ಅಂಬರೀಷ್ ಅವರ ಜನ್ಮದಿನದ ಅಂಗವಾಗಿ ಮೇ.29ರಂದು ಮಧ್ಯಾಹ್ನ 2.30ಕ್ಕೆ ನಗರದ ರೈತ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಗೌರವ ಸಮರ್ಪಣೆ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಬಳಗದ ಅಧ್ಯಕ್ಷ ಬೇಲೂರು ಸೋಮಶೇಖರ್ ತಿಳಿಸಿದರು.
ಅಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸದೆ ಸುಮಲತಾ ವಹಿಸಲಿದ್ದಾರೆ. ಸಾಹಿತಿ ಎಸ್.ಶಂಕರಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪಶು ವೈದ್ಯ ಕೆ.ಎಸ್.ಜಯರಾಂ, ಸಾವಯವ ಕೃಷಿಕ ರಂಗಶೆಟ್ಟಿ, ಶಿಕ್ಷಣ ಕ್ಷೇತ್ರದ ಸಾಧಕ ನಂಜರಾಜು ಹಾಗೂ ಸಾಂಪ್ರದಾಯಿಕ ಗ್ರಾಮೀಣ ಉತ್ಸವಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಮದ್ದೂರು ತಾಲೂಕು ದೊಡ್ಡರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಜಾತ್ರಾ ಮಹೋತ್ಸವ ಸಮಿತಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಶಿಕುಮಾರ್, ಅರುಣಕುಮಾರಿ, ಸತೀಶ್, ಜಯರಾಮ, ಮಹೇಶ್, ಮಧು, ಶಿವಲಿಂಗಯ್ಯ, ಪ್ರಸನ್ನ ಇದ್ದರು.