ಪ್ರಶಸ್ತಿಗೆ ನಳಿನಿ ತಿಮ್ಮಯ್ಯ, ಎಂ.ವಿ.ರಾಜೇಗೌಡ ಆಯ್ಕೆ: ಪ್ರತಿಷ್ಠಾನದ ಅಧ್ಯಕ್ಷ ಶಿವರಾಜು ಕೀಲಾರ ಮಾಹಿತಿ

Press conference on award presentation mandya
Published on

ಮಂಡ್ಯ: ಹನಕೆರೆ ಎಂ.ಶ್ರೀನಿವಾಸ್ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಎಂ.ಶ್ರೀನಿವಾಸ್ ಸಮಾಜಸೇವಾ ಪ್ರಶಸ್ತಿಗೆ ಮೈಸೂರಿನ ತಲಕಾವೇರಿ ಮಹಿಳಾ ಶಿಕ್ಷಣ ಸಂಸ್ಥೆಯ ನಳಿನಿ ತಿಮ್ಮಯ್ಯ ಹಾಗೂ ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿಗೆ ಕೆ.ಆರ್.ಪೇಟೆಯ ಪ್ರಗತಿಪರ ರೈತ ಎಂ.ವಿ.ರಾಜೇಗೌಡ ಆಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜು ಕೀಲಾರ, ಫೆ.2ರಂದು ಮಧ್ಯಾಹ್ನ 3.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಪ್ರಶಸ್ತಿ ಪ್ರದಾನ ಮಾಡುವರು. ವಿಧಾನಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಂಶುಪಾಲ ಡಾ.ಮ.ರಾಮಕೃಷ್ಣ ಅಭಿನಂದನಾ ನುಡಿಗಳನ್ನಾಡುವರು ಎಂದರು.

ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮೈಸೂರು ಮಿತ್ರ ಫೌಂಡೇಷನ್ ಅಧ್ಯಕ್ಷ ವಿಜಯ್ ರಾಮೇಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಎಸ್.ವಿಜಯಾನಂದ್, ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಎನ್.ಯೋಗೇಶ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ತಗ್ಗಹಳ್ಳಿ ವೆಂಕಟೇಶ್, ಜಿ.ಎನ್.ಶಿವರುದ್ರಪ್ಪ, ಎಚ್.ಬಿ.ನಾಗಪ್ಪ, ಎಚ್.ಎಂ.ರಾಮಚಂದ್ರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net