

ಮಂಡ್ಯ: ಮಳವಳ್ಳಿ ತಾಲೂಕು ಕಂದೂರು ಬೆಟ್ಟದ ತೆಂಕಹಳ್ಳಿ ಗ್ರಾಮದ ಸುಕ್ಷೇತ್ರ ರಸಸಿದ್ದೇಶ್ವರ ಮಠದ ವತಿಯಿಂದ ಮೇ 1ರಂದು ಮಠದ ಆವರಣದಲ್ಲಿ ಬ್ರಹ್ಮೋಪದೇಶಪೂರ್ವಕ ಗುರುಪಟ್ಟಾಧಿಕಾರಿ ಮಹೋತ್ಸವ ಹಾಗೂ ಸುಕ್ಷೇತ್ರದ ಮಹಾದ್ವಾರ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ ಎಂದು ಮಠಾಧ್ಯಕ್ಷ ನಂಜುಂಡಸ್ವಾಮೀಜಿ ಹೇಳಿದರು.
ಸುತ್ತೂರು ಕ್ಷೇತ್ರದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾಕ್ಷೇತ್ರದ ಸಿದ್ದಲಿಂಗಮಹಾಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮಾರಂಭವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀಕ್ಷೇತ್ರದ ಮಹಾದ್ವಾರ ಉದ್ಘಾಟಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ, ಶಾಸಕ ಗಣೇಶ್‌ಪ್ರಸಾದ್, ಚಾಂಷುಗರ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್, ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಮಹದೇವ ಬಿದರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ 25 ಸಾವಿರಕ್ಕೂ ಹೆಚ್ಚು ಜನರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದರು.
ಮುಖಂಡರಾದ ಬಬ್ರುವಾಹನ, ಕುಂದೂರು ಮೂರ್ತಿ, ಪುಟ್ಟಬುದ್ಧಿ ಇತರರಿದ್ದರು.