ಅ.1ರಂದು ಪ್ರತಿಮೆಗಳ ಅನಾವರಣ ಸಮಾರಂಭ: ಸಂಸ್ಥಾಪಕ ಅಧ್ಯಕ್ಷ ಡಾ.ಯಮದೂರು ಸಿದ್ದರಾಜು ಮಾಹಿತಿ

Press conference on unveiling of statues Mandya
Published on

ಮಂಡ್ಯ: ಭಗವಾನ್ ಬುದ್ಧ ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆಯ ವತಿಯಿಂದ ‘ಬುದ್ಧ, ಬಸವ, ಅಂಬೇಡ್ಕರ್ ಅವರ ಪ್ರತಿಮೆಗಳ ಅನಾವರಣ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಭಗವಾನ್ ಬುದ್ಧ ಬಿ.ಇಡಿ ಕಾಲೇಜು ಆವರಣದಲ್ಲಿ ಆ.1ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಯಮದೂರು ಸಿದ್ದರಾಜು ತಿಳಿಸಿದರು.

ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ ಮಹನೀಯರಾದ ಬುದ್ಧ, ಬಸವ, ಅಂಬೇಡ್ಕರ್ ಅವರ ಪ್ರತಿಮೆಯನ್ನು ಒಂದೇ ಕಡೆ ನಿರ್ಮಿಸಿ ಸಮಾನತೆಯನ್ನು ಸಾರುವ ಉದ್ದೇಶದಿಂದ ಅನಾವರಣಗೊಳಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದ ಸಾನಿಧ್ಯವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮೈತ್ರಿ ಬುದ್ಧ ವಿಹಾರದ ಡಾ.ಕಲ್ಯಾಣಸಿರಿ ಭಂತೇಜಿ, ದೇಗುಲ ಮಠದ ಚನ್ನಬಸವಸ್ವಾಮೀಜಿ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ಟಿ.ನಾರಾಯಣಸ್ವಾಮಿ ಅವರು ಅಂಬೇಡ್ಕರ್ ಕಾರದಾನ್ ದ್ವಿ-ಭಾಷಾ ಮಾಸಪತ್ರಿಕೆ ಬಿಡುಗಡೆ ಮಾಡಲಿದ್ದು, ಮಾಜಿ ಸಚಿವ ಎನ್.ಮಹೇಶ್ ಅವರು ಕಾಲೇಜು ಸಂಚಿಕೆ ಬಿಡುಗಡೆ ಮಾಡುವರು ಎಂದು ವಿವರಿಸಿದರು.

ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ವಿಶ್ರಾಂತ ಪ್ರಾಧ್ಯಾಪಕ ಡಾ.ಎಚ್.ಎಸ್.ಮುದ್ದೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮಳವಳ್ಳಿ ಕಸಾಪ ಅಧ್ಯಕ್ಷ ಡಾ.ಎಲ್.ಚೇತನ್‌ಕುಮಾರ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಂ.ಮಾಯಣ್ಣ ಸೇರಿದಂತೆ ಮಳವಳ್ಳಿ ತಾಲೂಕಿನ ವಿವಿಧ ಮಠಗಳ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಮು, ಟಿ.ಎಂ.ಮಹೇಶ್, ಎಚ್.ಆರ್.ಬಸವರಾಜ್, ಅಶೋಕ್, ಬಸವರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net