ಜವಾಬ್ದಾರಿಯುತ ಪತ್ರಿಕೋದ್ಯಮದಿಂದ ಉತ್ತಮ ಫಲಿತಾಂಶ : ತಹಸೀಲ್ದಾರ್ ಡಿ.ಅರ್ಚನಾ ಭಟ್

neravu
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆದಿವಾಸಿ ಅಭಿವೃದ್ಧಿ ಅರಿವು ನೆರವು ಕಾರ್ಯಕ್ರಮ ನಾರಂಕೋಡಿ ಕಾಲನಿಯಲ್ಲಿ ನಡೆಯಿತು. ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಮೊದಲಾದವರಿದ್ದರು.
Published on

ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಆದಿವಾಸಿ ಅಭಿವೃದ್ಧಿ ಅರಿವು ನೆರವು ಕಾರ್ಯಕ್ರಮ ಮಂಗಳವಾರ ಬೋಳಂತೂರು ನಾರಂಕೋಡಿ ಕಾಲನಿಯ ಮೈರೆ ಎಂಬುವರ ಮನೆಯಲ್ಲಿ ನಡೆಯಿತು.

ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜವಾಬ್ದಾರಿಯುತ ಪತ್ರಿಕೋದ್ಯಮದಿಂದ ಉತ್ತಮ ಫಲಿತಾಂಶಗಳು ದೊರಕುತ್ತವೆ. ಈ ನಿಟ್ಟಿನಲ್ಲಿ ಬಂಟ್ವಾಳದ ಪತ್ರಕರ್ತರ ಸಂಘ ಅರ್ಥಪೂರ್ಣ ಕಾರ್ಯಕ್ರಮ ಮಾಡಿದ್ದು, ನಾರಂಕೋಡಿ ಕಾಲನಿಯ ಬೇಡಿಕೆಗಳಿಗೆ ಸ್ಪಂದಿಸುತ್ತೇನೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಮಾತನಾಡಿ, ಬಂಟ್ವಾಳ ತಾಲೂಕಿನ ಕಾಲನಿ ಜನರ ಬದುಕನ್ನು ಹೊರಜಗತ್ತಿಗೆ ತೆರೆಯುವ ಈ ಕಾರ್ಯ ಮಹತ್ವದ್ದಾಗಿದ್ದು, ಇಲಾಖೆ ವತಿಯಿಂದ ಸಹಕಾರ ನೀಡಲಾಗುವುದು ಎಂದರು.

ಜನಶಿಕ್ಷಣ ಟ್ರಸ್ಟ್ ನಿರ್ದೇಶಕರಾದ ಶೀನ ಶೆಟ್ಟಿ, ಕೃಷ್ಣ ಮೂಲ್ಯ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಂದಾಯ, ಆರೋಗ್ಯ ಇಲಾಖೆಗಳ ಸಿಬ್ಬಂದಿ ಸಹಿತ ಪತ್ರಕರ್ತರ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಆರೋಗ್ಯ ತಪಾಸಣೆ, ಬಂಟ್ವಾಳ ತಾಲೂಕು ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ನೆರವಿನಿಂದ ಅಕ್ಕಿ ವಿತರಣೆ ನಡೆಯಿತು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ಸ್ವಾಗತಿಸಿದರು. ಪತ್ರಕರ್ತ ಕಿರಣ್ ಸರಪಾಡಿ ವಂದಿಸಿದರು. ಸಂಘದ ಸದಸ್ಯರಾದ ವೆಂಕಟೇಶ ಬಂಟ್ವಾಳ, ರತ್ನದೇವ ಪುಂಜಾಲಕಟ್ಟೆ, ಗಣೇಶ ಪ್ರಸಾದ ಪಾಂಡೇಲು, ಹರೀಶ ಮಾಂಬಾಡಿ, ರಮೇಶ್ ಕೆ.ಪುಣಚ, ಕಿಶೋರ್ ಪೆರಾಜೆ, ಚಂದ್ರಶೇಖರ ಕಲ್ಮಲೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net