ವಿದ್ಯಾರ್ಥಿಗಳು ಪತ್ರಿಕೆ ಓದಲಿ : ಎ.ಆರ್.ಸುಬ್ಬಯ್ಯಕಟ್ಟೆ ಸಲಹೆ

vidyapeetha
ಬದಿಯಡ್ಕ ಶ್ರೀ ಭಾರತಿ ವಿದ್ಯಾಪೀಠದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ನಡೆಯಿತು. ಎ.ಆರ್.ಸುಬ್ಬಯ್ಯಕಟ್ಟೆ, ಡಾ.ಬೇ.ಸೀ.ಗೋಪಾಲಕೃಷ್ಣ ಭಟ್ ಮೊದಲಾದವರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಪತ್ರಿಕೆ ಸಮಾಜದ ಕಣ್ಣು. ಅದನ್ನು ರಕ್ಷಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ವಿದ್ಯಾರ್ಥಿಗಳು ಪತ್ರಿಕೆಯ ಓದಿನ ಕಡೆಗೂ ಗಮನ ನೀಡಬೇಕು ಎಂದು ಕೆಯುಡಬ್ಲುೃಜೆ ಕಾಸರಗೋಡು ಜಿಲ್ಲಾ ಘಟಕ ಅಧ್ಯಕ್ಷ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ ಹೇಳಿದರು.

ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾಸರಗೋಡು ಜಿಲ್ಲಾ ಘಟಕದ ನೇತೃತ್ವದಲ್ಲಿ ಬದಿಯಡ್ಕ ಶ್ರೀ ಭಾರತಿ ವಿದ್ಯಾಪೀಠದಲ್ಲಿ ಸೋಮವಾರ ಆಯೋಜಿಸಲಾದ ಕನ್ನಡ ಪತ್ರಿಕಾ ದಿನದಲ್ಲಿ ಮಾತನಾಡಿದರು. ಹಿರಿಯ ಭಾಷಾ ತಜ್ಞ ಡಾ.ಬೇ.ಸೀ.ಗೋಪಾಲಕೃಷ್ಣ ಭಟ್ ಪತ್ರಿಕಾ ಸಂದೇಶ ನೀಡಿದರು.

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಶ್ರೀ ಭಾರತಿ ವಿದ್ಯಾಪೀಠದ ಪ್ರಬಂಧಕ ಜಯಪ್ರಕಾಶ್ ಪಜಿಲ, ಮುಖ್ಯಶಿಕ್ಷಕ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ, ನಿವೃತ್ತ ಪ್ರಾಧ್ಯಾಪಕ ಎ.ಶ್ರೀನಾಥ್, ಹಿರಿಯ ಪತ್ರಕರ್ತ ಅಚ್ಯುತ ಚೇವಾರ್, ಪೈವಳಿಕೆ ಗ್ರಾಮಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಜಡ್.ಎ.ಕಯ್ಯರು, ಗಡಿನಾಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ ಉಪಸ್ಥಿತರಿದ್ದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾಗಿ ಆಯ್ಕೆಯಾದ ಎ.ಆರ್.ಸುಬ್ಬಯ್ಯಕಟ್ಟೆ ಅವರನ್ನು ಶ್ರೀ ಭಾರತಿ ವಿದ್ಯಾಪೀಠದ ವತಿಯಿಂದ ಗೌರವಿಸಲಾಯಿತು. ಗಂಗಾಧರ ತೆಕ್ಕೆಮೂಲೆ ಸ್ವಾಗತಿಸಿದರು. ಪುರುಷೋತ್ತಮ ಪೆರ್ಲ ನಿರೂಪಿಸಿದರು. ವಕೀಲ ಥೋಮಸ್ ಡಿಸೋಜ ಸೀತಾಂಗೋಳಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net