ಪತ್ರಿಕಾ ದಿನ, ರಕ್ತದಾನ ಶಿಬಿರ ಶನಿವಾರ

Blood camp
Published on

ಲಕ್ಷ್ಮೇಶ್ವರ: ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಜು. 19ರಂದು ಶನಿವಾರ ಬೆಳಗ್ಗೆ 9.30ಕ್ಕೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸಭಾ ಭವನದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಪೂರ್ವಭಾವಿ ಸಭೆಯಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಲ್ಲು ಕಳಸಾಪುರ ಮಾಹಿತಿ ನೀಡಿ, ಈಗ ರಕ್ತದ ಅವಶ್ಯಕತೆ ಸಾಕಷ್ಟಿದೆ. ಹೀಗಾಗಿ ಪತ್ರಿಕಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಕನ್ನಡಪರ ಸಂಘಟನೆಗಳು, ಶಿಕ್ಷಕರು, ನೌಕರರು ಸೇರಿದಂತೆ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಆರೋಗ್ಯಕರ ಸಮಾಜಕ್ಕೆ ಅಳಿಲು ಸೇವೆ ಮಾಡಲಿದ್ದಾರೆ ಎಂದರು.

ಶಾಸಕ ಡಾ. ಚಂದ್ರು ಲಮಾಣಿ ಶಿಬಿರ ಉದ್ಘಾಟಿಸುವರು. ತಾಲೂಕು ವೈದ್ಯಾಧಿಕಾರಿ ಡಾ. ಸುಭಾಷ್ ದಾಯಗೊಂಡ, ಲಕ್ಷ್ಮೇಶ್ವರ ತಾಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ.ಪಿ.ಡಿ. ತೋಟದ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀಕಾಂತ ಖಾಟೇವಾಲೆ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ, ಜಿಮ್ಸ್ ಬ್ಲಡ್ ಬ್ಯಾಂಕ್ ವೈದ್ಯರು ಪಾಲ್ಗೊಳ್ಳಲಿದ್ದಾರೆ. ಹಿರಿಯ ವೈದ್ಯರು, ಸಮಾಜ ಸೇವಕರನ್ನು ಸನ್ಮಾನಿಸಲಾಗುವುದು ಎಂದರು.

ಹಿರಿಯ ಪತ್ರಕರ್ತರಾದ ರಮೇಶ ನಾಡಿಗೇರ, ದಿಗಂಬರ ಪೂಜಾರ, ನಾಗರಾಜ ಹಣಗಿ, ಅಶೋಕ ಸೊರಟೂರ, ಸೋಮಣ್ಣ ಯತ್ತಿನಹಳ್ಳಿ, ಶಿವಲಿಂಗಯ್ಯ ಹೊತಗಿಮಠ, ಮಂಜುನಾಥ ರಾಠೋಡ, ಕರಿಯಪ್ಪ ಶಿರಹಟ್ಟಿ, ಪರಮೇಶ ಲಮಾಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net