

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂದ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ಆಕಾಶವಾಣಿ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಉಪನ್ಯಾಸ ನೀಡಿದರು. ಸಂದ ಅಧ್ಯಕ್ಷ ಪ್ರಸಾದ ಶೆಟ್ಟಿ ಏಣಿಂಜೆ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಉಪಾಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಉಪಸ್ಥಿತರಿದ್ದರು.
ದಿತಿ ಸಾಂತ್ವನ ನಿಧಿ ಕುರಿತು ಆಲಿಕುಂಞಿ ಮಾಹಿತಿ ನೀಡಿದರು. ಸಂದ ಕಾರ್ಯದರ್ಶಿ ತುಕಾರಾಮ್ ಬಿ. ಸ್ವಾಗತಿಸಿದರು. ಮನೋಹರ ಸಂದೇಶ ವಾಚಿಸಿದರು. ಅಚುಶ್ರೀ ಬಾಂಗೇರು ಪರಿಚಯಿಸಿದರು. ಗಣೇಶ್ ಶಿರ್ಲಾಲು ವಂದಿಸಿದರು.
ದಿತಿ ಸಾಂತ್ವನ ನಿಧಿ ಹಸ್ತಾಂತರ
ಪತ್ರಕರ್ತ ಮನೋಹರ ಬಳಂಜ- ಲಿಖಿತಾ ದಂಪತಿಯ ಪುತ್ರಿ ದಿತಿ ಸ್ಮರಣಾರ್ಥ ಆರು ಮಂದಿ ಅನಾರೋಗ್ಯ ಪೀಡಿತರಿಗೆ ದಿತಿ ಸಾಂತ್ವನ ನಿಧಿಯನ್ನು ಹಸ್ತಾಂತರಿಸಲಾಯಿತು. ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. 200ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.