

ಸಕಲೇಶಪುರ: ಪತ್ರಿಕಾ ವಿತರಕರ ಸಮ್ಮೇಳನ ಮಾ.2 ರಂದು ಚನ್ನರಾಯಪಟ್ಟಣದಲ್ಲಿ ನಡೆಯಲಿದೆ ಎಂದು ಪತ್ರಿಕಾ ವಿತರಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಹೇಳಿದರು.
ಪಟ್ಟಣದಲ್ಲಿ ಶಾಸಕ ಸಿಮೆಂಟ್ ಮಂಜು ಅವರಿಗೆ ಕಾರ್ಯಕ್ರಮ ಆಹ್ವಾನ ಪತ್ರಿಕೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಕೆಗಳ ಆಧಾರಸ್ತಂಭವಾಗಿರುವ ವಿತರಕರ ಸಮಸ್ಯೆ ಆಲಿಸುವವರು ಇಲ್ಲದಾಗಿರುವ ಪರಿಣಾಮ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಮಟ್ಟದಲ್ಲಿ ಒಕ್ಕೂಟ ಸ್ಥಾಪಿಸಲಾಗಿದೆ. ಸದ್ಯ ಜಿಲ್ಲೆಯಲ್ಲೂ ಕಾರ್ಯಾಚರಣೆ ಆರಂಭಿಸಿದ್ದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭಾಗವಹಿಸಲಿದ್ದಾರೆ. ಆದ್ದರಿಂದ ಸಮ್ಮೇಳನಕ್ಕೆ ಪತ್ರಿಕಾ ವಿತರಕರಲ್ಲದೆ ಎಲ್ಲ ಪತ್ರಕರ್ತರ ಕುಟುಂಬಗಳು ಭಾಗವಹಿಸುವ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದರು.
ಒಕ್ಕೂಟದ ಪದಾಧಿಕಾರಿಗಳಾದ ಆಲೂರು ಸತೀಶ್, ಚನ್ನರಾಯಪಟ್ಟಣದ ನಂದನ್ ಪುಟ್ಟಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.