ಪತ್ರಿಕಾ ವಿತರಕರ ಸೇವೆ ಅಪಾರ

web5
ಗೋಕಾಕ ನಗರದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಪತ್ರಿಕಾ ವಿತರಕರನ್ನು ಸತ್ಕರಿಸಿದರು. ಟಿ.ಆರ್. ಕಾಗಲ್, ಭೀಮಗೌಡ ಪೋಲಿಸಗೌಡರ, ಭೀಮಶಿ ಭರಮಣ್ಣವರ, ಗುರುಸಿದ್ದಪ್ಪ ಪೂಜೇರಿ ಇತರರಿದ್ದರು.
Published on

ಗೋಕಾಕ: ದಿನಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಅಪಾರ. ಸುದ್ದಿ ಹೊತ್ತು ತರುವ ವಿತರಕರ ಶ್ರಮ, ಸಮಯ ಪ್ರಜ್ಞೆ ಹಾಗೂ ಕಾಯಕನಿಷ್ಠೆ ಶ್ಲಾಘನೀಯ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ನಗರದ ಸ್ವಕಾರ್ಯಾಲಯದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ನಿಮಿತ್ತ ಭಾನುವಾರ ಪತ್ರಿಕಾ ವಿತರಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ದೊಡ್ಡದು. ಲಾಕ್‌ಡೌನ್ ಸಂದರ್ಭದಲ್ಲಿಯೂ ವಾರಿಯರ್ಸ್‌ಗಳಂತೆ ಸೇವೆ ನೀಡಿದ್ದಾರೆ ಎಂದು ಸ್ಮರಿಸಿದರು.
ಪತ್ರಿಕೆಗಳ ಓದುಗರ ಸಂಖ್ಯೆ ಹೆಚ್ಚಾಗಬೇಕು. ಪತ್ರಿಕೆಗಳನ್ನು ಕೊಂಡು ಓದುವ ಮನೋಭಾವ ಬೆಳೆಸಿಕೊಂಡರೆ ಪತ್ರಿಕೆ ಸಂಸ್ಥೆಗಳು ಮತ್ತು ದುಡಿಯುವ ಸಿಬ್ಬಂದಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಓದುಗರು ಹಣಕೊಟ್ಟು ಪತ್ರಿಕೆಗಳನ್ನು ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾದರೆ ವಿತರಕರ ಬದುಕಿಗೆ ಆಶ್ರಯವಾಗುತ್ತದೆ ಜತೆಗೆ ಪತ್ರಿಕೋದ್ಯಮವೂ ಬೆಳೆಯುತ್ತದೆ ಎಂದರು.

ಪತ್ರಿಕಾ ವಿತರಕರಾದ ವಿವೇಕ ಮೂಲಂಗಿ, ಪ್ರಕಾಶ ಸುಣಗಾರ, ಮಹಾದೇವ ಗುದಗಗೋಳ, ಮಹಾಂತೇಶ ಮೂಲಂಗಿ, ವೀರಭದ್ರ ಪಾಟೀಲ ಇತರರನ್ನು ಶಾಸಕರು ಸನ್ಮಾನಿಸಿದರು. ಜಿಪಂ ಮಾಜಿ ಸದಸ್ಯ ಟಿ.ಆರ್. ಕಾಗಲ್, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಮುಖಂಡರಾದ ಸುರೇಶ ಸನದಿ, ಜಾವೇದ್ ಗೋಕಾಕ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಗುರುಸಿದ್ದಪ್ಪ ಪೂಜೇರಿ, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಲ್ಯಾಳ, ಕಾರ್ಯದರ್ಶಿ ಪ್ರದೀಪ ನಾಗನೂರ, ಸಹಕಾರ್ಯದರ್ಶಿ ಬಸವರಾಜ ಭರಮಣ್ಣವರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net