

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮದ ಪ್ರತಿ ಮನೆಗೆ 20 ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ವಾಟರ್ ಕ್ಯಾನ್ ವಿತರಣೆ ಹಾಗೂ ಪ್ರತಿ ಗುರುವಾರ ನಗರದ ಕಾವೇರಿ ನರ್ಸಿಂಗ್ ಹೋಂನಲ್ಲಿ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಕೃಷ್ಣ ತಿಳಿಸಿದರು.
ಜನರ ಆರೋಗ್ಯದ ಬಗ್ಗೆ ಕಾಳಜಿಸಿ ಅವರು ಶುದ್ಧ ಕುಡಿಯುವ ನೀರನ್ನು ಕುಡಿಯಲು ಅನುಕೂಲವಾಗುವಂತೆ ವಾಟರ್ ಕ್ಯಾನ್‌ಗಳನ್ನು ವಿತರಿಸಲಾಗುತ್ತಿದೆ. ಮಂಡ್ಯ ತಾಲೂಕು ಉಪ್ಪರಕನಹಳ್ಳಿ ಗ್ರಾಮದಲ್ಲಿ ಆ.11ರಂದು ಬೆಳಗ್ಗೆ 8ಕ್ಕೆ ಕ್ಯಾನ್‌ಗಳ ವಿತರಣೆಗೆ ಚಾಲನೆ ನೀಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಂಡ್ಯ ನಗರದಲ್ಲಿನ ತಮ್ಮದೇ ಮಾಲೀಕತ್ವದ ಕಾವೇರಿ ನರ್ಸಿಂಗ್ ಹೋಂನಲ್ಲಿ ಪ್ರತಿ ಗುರುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಗರ್ಭಿಣಿಯರಿಗೆ ಉಚಿತವಾಗಿ ತಪಾಸಣೆ ಮಾಡಲಾಗುವುದು. ರಿಯಾಯಿತಿ ದರದಲ್ಲಿ ಸ್ಕ್ಯಾನಿಂಗ್ ಸೌಲಭ್ಯವನ್ನು ಒದಗಿಸಲಾಗುವುದು. ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ನಾನೂ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಪಕ್ಷವು ಅವಕಾಶ ಮಾಡಿಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನಮ್ಮೆಲ್ಲರ ಆದ್ಯತೆ ಮತ್ತು ಗುರಿ ಎಂದರು.
ಮುಖಂಡರಾದ ಸೋಮು ಸ್ವರ್ಣಸಂದ್ರ, ಅಮ್ಜದ್‌ಪಾಷಾ, ಮುರುಳಿ ಹಾಜರಿದ್ದರು.