ಕಲ್ಲು ತೂರಿದವರ ವಿರುದ್ಧ ಕ್ರಮ - ಕ್ರಿಶ್ಚಿಯನ್ ಯೂನಿಯನ್ ಒತ್ತಾಯ

Published on


ಪುತ್ತೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿಕೆಯನ್ನು ತಿರುಚಿ ಮಾನಹಾನಿಗೆ ಪ್ರಯತ್ನಿಸಿ, ಅವರ ಅನುಪಸ್ಥಿತಿಯಲ್ಲಿ ಮನೆಗೆ ರಾತ್ರಿ ಕಲ್ಲು ತೂರಾಟ ಮಾಡಿ ರಾಜಕೀಯ ಹಿಂಸಾಚಾರಕ್ಕೆ ಯತ್ನಿಸಿದ ದ.ಕ ಜಿಲ್ಲಾ ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಖಂಡಿಸುತ್ತೇವೆ ಎಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು.


ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ಏಕೈಕ ಪ್ರತಿನಿಽಯಾಗಿ ಜಾತ್ಯತೀತ ನಿಲುವಿನೊಂದಿಗೆ ಸರ್ವ ಸಮುದಾಯದ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳು ಮಾತ್ರ ಇದ್ದ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡಿರುವುದು ಭಯೋತ್ಪಾದನೆಗೆ ಸಮನಾದ ಕೃತ್ಯವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಕಲ್ಲು ತೂರಾಟ ಮಾಡಿದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ, ಹಿಂದೆ ಇರುವ ದುಷ್ಟ ಶಕ್ತಿಗಳನ್ನು ಸಾರ್ವಜನಿಕವಾಗಿ ತಿಳಿಸುವ ಅಗತ್ಯವಿದೆ. ಪ್ರಕರಣದಲ್ಲಿ ಸರ್ಕಾರ ಕಾನೂನಾತ್ಮಕ ಕ್ರಮಗಳನ್ನು ಜರಗಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.


ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಉಪಾಧ್ಯಕ್ಷ ಕೆನ್ಯೂಟ್ ಮಸ್ಕರೇನಸ್, ಗೌರವ ಸಲಹೆಗಾರ ವಲೇರಿಯನ್ ಡಯಾಸ್, ಕೋಶಾಽಕಾರಿ ವಾಲ್ಟರ್ ಸಿಕ್ವೇರಾ, ಜತೆ ಕಾರ್ಯದರ್ಶಿ ಜೋಕಿಂ ಲೂಯಿಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net