ಒಕ್ಕಲಿಗರ ಜಿಲ್ಲಾ ಮಾತೃಸಂಘವನ್ನು ಸ್ಥಾಪನೆ - ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ ಮಾಹಿತಿ

Published on


ಪುತ್ತೂರು: ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಸಮುದಾಯದ ಜನರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃಸಂಘವನ್ನು ಸ್ಥಾಪಿಸಲಾಗಿದ್ದು, ಸಮಾಜದ ಸಂಘಟನೆಯನ್ನು ದೃಢಗೊಳಿಸಿ ಅನಾಥರಿಗೆ, ಅಶಕ್ತರಿಗೆ, ನೊಂದವರಿಗೆ ನೆರವು ನೀಡಿ ಮುಖ್ಯವಾಹಿನಿಗೆ ತರುವ ಗುರಿಯನ್ನು ಸಂಘಟನೆ ಇಟ್ಟುಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ ಕೆ ಮಂಗಳೂರು ಹೇಳಿದರು.
೧೯೭೮ರಲ್ಲಿ ಮಂಗಳೂರಿನ ಒಕ್ಕಲಿಗರ ಯಾನೆ ಗೌಡ ಸೇವಾ ಸಂಘವನ್ನು ಸ್ಥಾಪಿಸಲಾಗಿದ್ದು, ೨೦೧೮ರಲ್ಲಿ ಮಾತೃಸಂಘದ ಸ್ಥಾಪನೆಯ ಬಗ್ಗೆ ಪುತ್ತೂರಿನಲ್ಲಿ ಸಭೆಯನ್ನು ನಡೆಸಲಾಗಿತ್ತು. ಆದರೆ ಕೋವಿಡ್ ಕಾರಣ ಮುಂದಿನ ಪ್ರಕ್ರಿಯೆಗಳನ್ನು ನಡೆಸಲಾಗಿಲ್ಲ. ಜಿಲ್ಲೆಯ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ವಿಟ್ಲ, ಬಂಟ್ವಾಳ, ಮಂಗಳೂರು ತಾಲೂಕಿನಲ್ಲಿ ಒಮ್ಮತದ ಅಭಿಪ್ರಾಯದಂತೆ ಆ.೩೦ರಂದು ಸಂಘದ ಸ್ಥಾಪನೆ ಮಾಡಲಾಗಿದೆ. ಸಮುದಾಯದ ಆಚಾರ ವಿಚಾರ, ಸಂಸ್ಕೃತಿಯನ್ನು ಉಳಿಸುವ ಉದ್ದೇಶವನ್ನು ಹೊಂದಲಾಗಿದೆ. ಸಮುದಾಯದ ಜನಗಣತಿಯನ್ನು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಈ ಮೂಲಕ ರಾಜಕೀಯವಾಗಿ ಸಮುದಾಯವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ, ಜಿಲ್ಲಾ ಉಪಾಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ರಾಮದಾಸ್ ಗೌಡ ಎಸ್., ತಿಮ್ಮಪ್ಪ ಗೌಡ ಕುಂಡಡ್ಕ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net