ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ಏ.೨೪ರಂದು ಶಿವ ಕೃಪಾ ಸಭಾಭವನದ ಲೋಕಾರ್ಪಣೆ

20240420_103555
Published on

ಪುತ್ತೂರು: ಕಲ್ಲಾರೆ ಶಿವಬ್ರಾಹ್ಮಣ್ಯ (ಸ್ಥಾನಿಕ) ಸಮಾಜ ಸೇವಾ ಸಂಘ ೧೯೩೬ರಲ್ಲಿ ಸ್ಥಾಪನೆಗೊಂಡು, ಕಳೆದ೮೮ ವರ್ಷಗಳಿಂದ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ. ನೂತನವಾಗಿ ಸುಮಾರು ೧.೫೦ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ಶಿವ ಕೃಪಾ ಸಭಾಭವನದ ಲೋಕಾರ್ಪಣೆ ಏ.೨೪ರಂದು ಸಾಯಂಕಾಲ ೬.೩೦ಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಹೇಳಿದರು.

ಸಂಘ ದತ್ತಿ ವಿದ್ಯಾರ್ಥಿ ನಿಧಿಯನ್ನು ಸ್ಥಾಪಿಸಿಕೊಂಡು ಅರ್ಹ ವಿದ್ಯಾರ್ಥಿಗಳಿಗೆ ಸಹಾಯ, ಪುತ್ತೂರಿನ ಕಲ್ಲಾರೆಯಲ್ಲಿ ೧ ಎಕ್ರೆ ಜಮೀನು, ಅಂಗಡಿಗಳು ಹೊಂದಿರುವುದು ಸಕ್ರೀಯ ಸದಸ್ಯರ ಶ್ರಮ ಮತ್ತು ಸಾಧನೆಯ ಪ್ರತೀಕವಾಗಿದೆ. ಸದ್ಯ ಸುಮಾರು ೭ಸಾವಿರ ಚದರ ಅಡಿಯಲ್ಲಿ ಸಂಪೂರ್ಣ ಹವಾ ನಿಯಂತ್ರಿತ ವ್ಯವಸ್ಥೆಯನ್ನೊಳಗೊಂಡ ಸಭಾಭವನದಲ್ಲಿ ಸುಮಾರು ೭೦೦ರಿಂದ ೮೦೦ ಮಂದಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಶೃಂಗೇರಿ ಶ್ರೀಗಳ ಸ್ವಾಗತ ಮಾಡಿಕೊಂಡು, ಧೂಳೀ ಪಾದಪೂಜೆ, ಕಟ್ಟಡ ನಿರ್ಮಾಣದ ಕರ್ತೃಗಳಿಗೆ ಸಂಮಾನ, ಆಶೀರ್ವಚನ, ಫಲ ಸಮರ್ಪಣೆ, ಮಂತ್ರಾಕ್ಷತೆಯ ಬಳಿಕ ಅಂಬಿಕಾ ವಿದ್ಯಾಲಯಕ್ಕೆ ತೆರಳಲಿದ್ದಾರೆ. ಏ.೨೫ರಂದು ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ವೆಂಕಟ್ರಮಣ ದೇವಸ್ಥಾನದ ಬೇಟಿಯನ್ನು ಶ್ರೀಗಳು ನಡೆಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ., ಕಾರ್ಯದರ್ಶಿ ಎ. ಬಾಲಕೃಷ್ಣ ರಾವ್, ಕೋಶಾಧಿಕಾರಿ ಎನ್.ಎಸ್. ನಟರಾಜ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net