ಮುಖಂಡರು ಯಾಕೆ ಮಾತನಾಡುತ್ತಿಲ್ಲ? -  ಕಾಂಗ್ರೆಸ್ ಮುಖಂಡ ಎಚ್.ಮಹಮ್ಮದ್ ಆಲಿ ಪ್ರಶ್ನೆ

Published on

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿ ಹಿಂದು ಮುಖಂಡರ ಸಹಿತ ಯಾರೂ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ ಪ್ರಶ್ನಿಸಿದ್ದಾರೆ.

ಒಂದೂವರೆ ತಿಂಗಳ ಹಿಂದೆ ಪ್ರಕರಣ ಬೆಳಕಿಗೆ ಬಂದು ರಾಜಿ ಪಂಚಾಯಿತಿಗೆ ನಡೆಸಿ ಮದುವೆ ಮಾಡಿಸುತ್ತಾರೆಂಬ ತೀರ್ಮಾನಕ್ಕೆ ಬರಲಾಗಿದ್ದು, ಈಗ ಯುವಕ ಓಡಿಹೋಗಿರುವುದು ಬೆಳಕಿಗೆ ಬಂದಿದೆ. ಪುತ್ತೂರಿನಲ್ಲಿ ಯಾವುದೇ ಪ್ರಕರಣ ನಡೆದರೂ ಮುಂಚೂಣಿಯಲ್ಲಿರುತ್ತಿದ್ದ ಅರುಣ್‌ಕುಮಾರ್ ಪುತ್ತಿಲ ಈಗ ಎಲ್ಲಿ ಹೋಗಿದ್ದಾರೆ. ವೈದ್ಯರಿಗೆ ಸಮಸ್ಯೆಯಾದಾಗ ಠಾಣೆಗೆ ಮುತ್ತಿಗೆ ಹಾಕಿ, ರಸ್ತೆ ತಡೆ ನಡೆಸಿದವರು ಈಗ ಯಾಕೆ ಮಾತನಾಡುತ್ತಿಲ್ಲ. ಈ ಪ್ರಕರಣದಲ್ಲಿ ಯಾರೆಲ್ಲಾ ಮಧ್ಯಸ್ತಿಗೆ ವಹಿಸಲು ಹೋಗಿದ್ದಾರೋ ಅವರೆಲ್ಲರ ಹೆಸರು ಬಹಿರಂಗವಾಗಬೇಕು. ಯುವತಿಗೆ ಆರೋಪಿ ಆತನ ಮನೆಯಲ್ಲೇ ಅತ್ಯಾಚಾರ ನಡೆಸಿದ್ದು, ಈ ನೆಲೆಯಲ್ಲಿ ಆರೋಪಿಯ ಅಪ್ಪನನ್ನೂ ಬಂಧಿಸಬೇಕು. ಪೊಲೀಸರು ಆರೋಪಿಯ ಮನೆಯಲ್ಲೂ ತನಿಖೆ ನಡೆಸಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡರಾದ ಮೌರಿಸ್ ಮಸ್ಕರೇನಸ್, ಸುರೇಶ್ ಪೂಜಾರಿ, ಹರೀಶ್ ಆಚಾರ್ಯ, ರಷೀದ್ ಮುರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net