ಪಕ್ಷದ ಹುದ್ದೆಯಿಂದ ಬಿಡುಗಡೆಗೆ ಕೋರಿಕೆ - ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಿಂದ ಮಾಹಿತಿ

WhatsApp Image 2024-06-10 at 20.36.10_dc9d0d27
Published on


ಪುತ್ತೂರು: ಕಾಂಗ್ರೆಸ್‌ನ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ನ ೩ ಚರ್ಷದ ಅವಽ ಪೂರ್ಣಗೊಂಡಿದ್ದು, ಇನ್ನು ಮುಂದಿನ ಅವಽಗೆ ಮುಂದುವರಿಯುವ ಯಾವುದೇ ಇರಾದೆ ನಮ್ಮಲ್ಲಿ ಇಲ್ಲದಿರುವುದರಿಂದ ಅಧ್ಯಕ್ಷೀಯ ಹುದ್ದೆಯಿಂದ ಬಿಡುಗಡೆಗೊಳಿಸಬೇಕಾಗಿ ಪಕ್ಷದ ವರಿಷ್ಠರಿಗೆ ತಿಳಿಯಪಡಿಸಿದ್ದೇವೆ ಎಂದು ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಎಂ. ಬಿ. ವಿಶ್ವನಾಥ ರೈ ಮತ್ತು ಡಾ. ರಾಜಾರಾಮ್ ಕೆ. ಬಿ. ಹೇಳಿದರು.


ಎರಡು ಬ್ಲಾಕ್‌ಗಳ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ಸಂತೃಪ್ತಿ ನಮಗಿದೆ. ನಮ್ಮ ಅವಽಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ ಕಾರ್ಯಕರ್ತರನ್ನು ಸಂಘಟಿಸಿದ್ದೇವೆ. ಪಕ್ಷದ ವರಿಷ್ಠರ ಆದೇಶದಂತೆ ಕಾಲಕಾಲಕ್ಕೆ ನಿರ್ವಹಿಸಬೇಕಾದ ಕಾರ್ಯಕ್ರಮಗಳನ್ನು, ಪ್ರತಿಭಟನಾ ಸಭೆಗಳನ್ನು ನಡೆಸಿ ಪಕ್ಷವನ್ನು ಸದಾ ಚಟುವಟಿಕೆಯಲ್ಲಿ ಇಟ್ಟಿದ್ದೇವೆ. ಪಕ್ಷದ ಎಲ್ಲ ಮಂಚೂಣಿ ಘಟಕಗಳು ಕ್ರಿಯಾಶೀಲವಾಗಿ ಕಾರ್ಯವೆಸಗುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ನಮ್ಮ ಶ್ರಮದ ಫಲಶೃತಿಯಾಗಿ ಅಶೋಕ್ ಕುಮಾರ್ ರೈ ಶಾಸಕರಾಗಿ ಆರಿಸಿ ಬಂದರು. ನಮ್ಮ ಅಧ್ಯಕ್ಷೀಯ ಅವಽಯಲ್ಲಿ ಓರ್ವ ಶಾಸಕರನ್ನು ಪಡೆದ ಧನ್ಯತಾ ಭಾವ ನಮಗಿದೆ. ಲೋಕಸಭಾ ಚುನಾವಣೆಯಲ್ಲಿ ಕೂಡ ಬೂತ್‌ಮಟ್ಟದಲ್ಲಿ ಕಾರ್ಯಕರ್ತರನ್ನು ತೊಡಗಿಸಿಕೊಂಡು ಮತಯಾಚನೆ ಮಾಡಿದ್ದೇವೆ. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ. ಪಕ್ಷ ಉನ್ನತ ಸ್ಥಾನವನ್ನು ನೀಡಿದರೆ ಒಂದು ಅವಽಗೆ ಸ್ವೀಕರಿಸುತ್ತೇವೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net