ನಾಳೆ ಆಟಿಡೊಂಜಿ ದಿನ ಕಾರ್ಯಕ್ರಮ

Published on

ಪುತ್ತೂರು: ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಮತ್ತು ಯುವವೇದಿಕೆ ಪುತ್ತೂರು ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ ೨೭ರಂದು ಕೊಂಬೆಟ್ಟು ಬಂಟರ ಭವನದಲ್ಲಿ ಜರುಗಲಿದೆ ಎಂದು ಆದಿದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಬಾಬು ಮರಿಕೆ ತಿಳಿಸಿದರು.

ಬೆಳಗ್ಗೆ ೯.೩೦ಕ್ಕೆ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಮೋಹನ್ ನೆಲ್ಲಿಗುಂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ೧೧ಕ್ಕೆ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್, ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ, ಮಾಜಿ ಶಾಸಕ ಸಂಜೀವ ಮಠಂದೂರು, ಆದಿ ದ್ರಾವಿಡ ಯುವ ವೇದಿಕೆ ಪುತ್ತೂರು ಅಧ್ಯಕ್ಷ ಮಹೇಶ್ ಮರಿಕೆ ಮತ್ತಿತರರು ಭಾಗವಹಿಸಲಿದ್ದಾರೆ. ೨೦೨೪-೨೫ರಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜಸೇವಾ ಸಂಘದ ಗೌರವಾಧ್ಯಕ್ಷ ಸೋಮನಾಥ ಉಪ್ಪಿನಂಗಡಿ, ಗೌರವ ಸಲಹೆಗಾರ ಬಿ.ಕೆ.ಅಣ್ಣಪ್ಪ ಕಾರೆಕಾಡು, ಪುತ್ತೂರು ಘಟಕದ ಗೌರವಾಧ್ಯಕ್ಷ ಲೋಹಿತ್ ಅಮ್ಚಿನಡ್ಕ, ಉಪಾಧ್ಯಕ್ಷ ಜಯ ಕಾರೆಕಾಡು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net