ಪುತ್ತೂರು ಕೋ ಆಪರೇಟಿವ್ ಟೌನ್  - ಬ್ಯಾಂಕ್‌ನಿಂದ ಗ್ರಾಹಕಸ್ನೇಹಿ ಸೇವೆ -  ಅಧ್ಯಕ್ಷ ಕಿಶೋರ್ ಕೊಳತ್ತಾಯ ಎನ್. ಮಾಹಿತಿ

Published on

ಪುತ್ತೂರು: ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನ ಆಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು, ಸೆ.೧೪ರಂದು ನಡೆಯುವ ೧೧೬ನೇ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಅಧ್ಯಕ್ಷ ಕಿಶೋರ್ ಕೊಳತ್ತಾಯ ಎನ್. ಹೇಳಿದರು.

೨೦೨೪-೨೫ನೇ ಸಾಲಿನಲ್ಲಿ ಬ್ಯಾಂಕ್ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಽಸಿದ್ದು, ಒಟ್ಟು ಠೇವಣಿ ೭೪.೮೭ ಕೋಟಿ ರೂ., ೫.೩೧ ಕೋಟಿ ರೂ. ಆಗಿದೆ. ಒಟ್ಟು ವ್ಯವಹಾರ ೧೨೬.೨೬ ಕೋಟಿ ರೂ. ದಾಟಿದ್ದು, ೧.೦೪ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಆರ್‌ಬಿಐ ನಿಯಮಾನುಸಾರ ಬಲಿಷ್ಠ ಕೋ ಆಪರೇಟಿವ್ ಬ್ಯಾಂಕ್ ಎನಿಸಿಕೊಳ್ಳಲು ಬ್ಯಾಂಕ್‌ನ ನಿವ್ವಳ ಅನುತ್ಪಾದಿತ ಆಸ್ತಿ ಶೇ.೧ಕ್ಕಿಂತ ಕಡಿಮೆ ಇದೆ. ಲೆಕ್ಕಪರಿಶೋಧನೆಯಲ್ಲಿ ಎ ಗ್ರೇಡ್ ಬಂದಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮಗಳ ಪ್ರಕಾರ ‘ಆರ್ಥಿಕವಾಗಿ ಬಲಿಷ್ಠ ಮತ್ತು ಉತ್ತಮ ಆಡಳಿತ ಬ್ಯಾಕ್’ ಎಂಬ ಸರ್ಟಿಫಿಕೇಟ್ ಪಡೆದುಕೊಂಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬ್ಯಾಂಕ್ ಉಪಾಧ್ಯಕ್ಷ ಶ್ರೀಧರ ಗೌಡ ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ್ ಶೆಟ್ಟಿ, ನಿರ್ದೇಶಕರಾದ ರಾಮಚಂದ್ರ ಕಾಮತ್, ಚಂದ್ರಶೇಖರ್ ರಾವ್ ಬಪ್ಪಳಿಗೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net