ಕೆಎಸ್‌ಆರ್‌ಟಿಸಿಗೆ ಪ್ರತಿಷ್ಠಿತ ಸ್ಕ್ವಾಚ್ ರಾಷ್ಟ್ರೀಯ ಪ್ರಶಸ್ತಿ

ksrtc
Published on

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ತನ್ನ ಸಿಬ್ಬಂದಿಗಾಗಿ ಜಾರಿ ಮಾಡಿದ ವಿನೂತನ ರೂ.೧ ಕೋಟಿ ರೂ. ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ ಸ್ಕ್ವಾಚ್ ರಾಷ್ಟ್ರೀಯ ಪ್ರಶಸ್ತಿ-೨೦೨೩ ಲಭಿಸಿದೆ.
ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, ೧೯೯೭ರಲ್ಲಿ ಸ್ಥಾಪಿತವಾಗಿದೆ. ಈ ಸಂಸ್ಥೆಯು ೨೦೦೩ ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ.
ಸ್ಕಾಚ್ ಇಂಡಿಯಾ ಆಯೋಜಿಸಿದ್ದ ೯೫ನೇ ಸ್ಕಾಚ್ ಸಮಿತಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್ ಅಧ್ಯಕ್ಷ ಸಮೀರ್ ಕೊಚ್ಚರ್, ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ತಾಂತ್ರಿಕ ಶಿಲ್ಪಿ ಎನ್.ಕೆ.ಬಸವರಾಜು, ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಶ್ರೀನಿವಾಸ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ನಿಗಮವು ಈ ಯೋಜನೆ ಅಡಿ ಇದುವರೆಗೂ ತನ್ನ ೯ ಸಿಬ್ಬಂದಿಯ ಅವಲಂಭಿತರಿಗೆ ತಲಾ ೧ ಕೋಟಿ ರೂ. ಅಪಘಾತ ವಿಮಾ ಪರಿಹಾರ ಚೆಕ್ ವಿತರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net