ಕನ್ನಡ ಮಾಧ್ಯಮ ಮುಚ್ಚುವುದನ್ನು ತಡೆಯಿರಿ

22-02-Shiva-5
ಶಕ್ತಿನಗರದ ಡಿಎವಿ ಶಾಲೆಯಲ್ಲಿ ಕನ್ನಡ ಮಾಧ್ಯಮ ತರಗತಿ ಮುಚ್ಚುತ್ತಿರುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರ ಜಿಲ್ಲಾ ಕನ್ನಡ ಕ್ರಿಯಾ ಸಮಿತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು. ಸಮಿತಿ ಗೌರವಾಧ್ಯಕ್ಷ ರಫೀಕ್ ಅಹ್ಮದ್, ಅಧ್ಯಕ್ಷ ಮಲ್ಲಿಕಾರ್ಜುನ ನಡುವಿನಮನಿ, ಪದಾಕಾರಿಗಳಾದ ಬಷೀರ್ ಅಹ್ಮದ್ ಹೊಸಮನಿ, ರುದ್ರಯ್ಯ ಗುಣಾರಿ, ಸಂಗಮೇಶ ಮಂಗಾನವರ್ ಇದ್ದರು.
Published on

ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿರುವ ಕರ್ನಾಟಕ ವಿದ್ಯುತ್ ನಿಗಮದ ಡಿಎವಿ ಶಾಲೆಯಲ್ಲಿ ಕನ್ನಡ ಮಾಧ್ಯಮವನ್ನು ಮುಚ್ಚುತ್ತಿರುವುದನ್ನು ತಡೆಯಬೇಕು. ಶಾಲೆಗೆ ನೀಡಿದ ಪರವಾನಗಿ ರದ್ದುಗೊಳಿಸಬೇಕು ಎಂದು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ಒತ್ತಾಯಿಸಿದೆ.
ಸಮಿತಿ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಿ, ಕನ್ನಡ ಮಾಧ್ಯಮ ಮತ್ತು ಇಂಗ್ಲೀಷ್ ಮಾಧ್ಯಮದ ತರಗತಿಗಳಿದ್ದ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕನ್ನಡ ಮಾಧ್ಯಮವನ್ನು ಮುಚ್ಚಿ ಕೇವಲ ಇಂಗ್ಲೀಷ್ ಮಾಧ್ಯಮ ಮಾತ್ರ ಉಳಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು.
ಈ ಹಿಂದೆ ಕರ್ನಾಟಕ ವಿದ್ಯುತ್ ನಿಗಮದಿಂದಲೇ ಶಾಲೆಯನ್ನು ನಡೆಸಲಾಗುತ್ತಿತ್ತು. 2009-2010ನೇ ಸಾಲಿನಿಂದ ಶಾಲೆಯನ್ನು ದಯಾನಂದ ಆಂಗ್ಲೋ ವೇದಿಕೆ ಎಂಬ ಖಾಸಗಿ ಶಿಕ್ಷಣ ಸಂಸ್ಥೆಗೆ ಹಸ್ತಾಂತರ ಮಾಡಲಾಗಿದೆ. ಎಲ್‌ಕೆಜಿಯಿಂದ 10ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ತರಗತಿಗಳು ನಡೆಸಲಾಗುತ್ತಿತ್ತು.
ಕನ್ನಡ ಮಾಧ್ಯಮಕ್ಕೆ ದಾಖಲಾತಿ ಕಡಿಮೆಯಿದೆ ಎನ್ನುವ ನೆಪವೊಡ್ಡಿ ಕನ್ನಡ ಮಾಧ್ಯಮವನ್ನು ಮುಚ್ಚಲಾಗುತ್ತಿದೆ. 30 ವರ್ಷಗಳಿಂದ ನಡೆಯುತ್ತಿರುವ ಶಾಲೆಯಲ್ಲಿ ಕನ್ನಡ ಮಾಧ್ಯಮ ಬಿಟ್ಟು ಕೇವಲ ಇಂಗ್ಲೀಷ್ ಮಾಧ್ಯಮ ಶಾಲೆಯನ್ನಾಗಿ ಮಾಡುತ್ತಿರುವುದು ಸಮಂಜಸವಲ್ಲ.
ಆರ್‌ಟಿಪಿಎಸ್ ನೌಕರರು ಮತ್ತು ಕಾರ್ಮಿಕರು ಮಕ್ಕಳು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಲು ಅನುಕೂಲವಾಗುವಂತೆ ಡಿಎವಿ ಶಾಲೆಯಲ್ಲಿ ಕನ್ನಡ ಮಾಧ್ಯಮ ಮುಂದುವರಿಯುವಂತೆ ಮಾಡಬೇಕು ಇಲ್ಲವಾದಲ್ಲಿ ಶಾಲೆಗೆ ನೀಡಿರುವ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಮಿತಿ ಗೌರವಾಧ್ಯಕ್ಷ ರಫೀಕ್ ಅಹ್ಮದ್, ಅಧ್ಯಕ್ಷ ಮಲ್ಲಿಕಾರ್ಜುನ ನಡುವಿನಮನಿ, ಪದಾಕಾರಿಗಳಾದ ಬಷೀರ್ ಅಹ್ಮದ್ ಹೊಸಮನಿ, ರುದ್ರಯ್ಯ ಗುಣಾರಿ, ಸಂಗಮೇಶ ಮಂಗಾನವರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net