

ರಾಯಚೂರು: ಕಾರ್ಮಿಕ ವಿರೋಧಿ ಸಂಹಿತೆಯನ್ನು ರದ್ದುಗೊಳಿಸಬೇಕು ಮತ್ತು ಬಾಕಿ ಇರುವ ಶೈಕ್ಷಣಿಕ ಧನ ಸಹಾಯ ಬಿಡುಗಡೆಗೆ ಒತ್ತಾಯಿಸಿ ಆ.24ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಂಟಿ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ ತಿಳಿಸಿದರು.
ಇದನ್ನೂ ಓದಿ: ಬಾರ್ ಮುಂದೆ ಹಲಿಗೆ ಬಾರಿಸಿದ ಪೌರಕಾರ್ಮಿಕರು!
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ನಕಲಿ ಕಾರ್ಡ್ ತಡೆಗಟ್ಟಲು ಸೇವಾಸಿಂಧು ಕೇಂದ್ರಗಳಲ್ಲಿ ನೋಂದಣಿ ಮತ್ತು ನವೀಕರಣ ಕಾರ್ಯ ನಿಲ್ಲಿಸಬೇಕು. ಕಟ್ಟಡ ಕಾರ್ಮಿಕ ಕಲ್ಯಾಣ ನಿಧಿಯ ದುರ್ಬಳಕೆ ಆಗದಂತೆ ತಡೆಯಬೇಕು.
ಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಶಬ್ಬೀರ್ ಜಾಲಹಳ್ಳಿ ತಿಳಿಸಿದರು.
ಜಿಲ್ಲಾಧ್ಯಕ್ಷ ರುದ್ರಪ್ಪ ನಾಯಕ, ಪದಾಧಿಕಾರಿಗಳಾದ ಯುಸೂಫ್ ಗ್ವಾಡಿಕಾರ, ಅನ್ವರ್ ಪಾಷಾ ಇದ್ದರು.