ಹಿರಿಯ ಸಿವಿಲ್ ನ್ಯಾಯಧೀಶ ಪರಶುರಾಮ ದೊಡ್ಡಮನಿ ಸಲಹೆ; ಪೋಕ್ಸೊ, ಬಾಲ್ಯವಿವಾಹ, ಭ್ರೂಣ ಹತ್ಯೆಗಳನ್ನು ತಡೆಗಟ್ಟಿ

12 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೊ, ಬಾಲ್ಯವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತೆಡಯಲು ಎಲ್ಲರೂ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದರು.
ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಽಕಾರ ಸಹಯೋಗದೊಂದಿಗೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಮಕ್ಕಳ ರಕ್ಷಣೆಗಾಗಿ ಇರುವು ವಿವಿಧ ಕಾನೂನುಗಳ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕ ಯುದಲ್ಲೂ ಹೆಚ್ಚುತ್ತಿರುವ ಮೌಢ್ಯತೆಯನ್ನು ಹೋಗಲಾಡಿಸಲು ಜಾಗೃತಿ ಮೂಡಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಇರುವ ಬೇಧಭಾವದ ಮನೋಭಾವನೆ ದೂರವಾಗಬೇಕು. 18 ವರ್ಷದೊಳಗಿನ ಮಗು ಕೆಲಸಕ್ಕೆ ಸೇರಬಾರದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಮಾತನಾಡಿ, ಮಕ್ಕಳು ಓದಿನಲ್ಲಿ ಹಿಂದಿರುವ ಅಥವಾ ಮನೆಯಲ್ಲಿ ತೊಂದರೆ ಇರುವಂಥ ಮಕ್ಕಳ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ಮಾತನಾಡಿದರು. ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಉಪನ್ಯಾಸ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ನೀತಾ ವಾಡಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಽಕಾರಿ ಗೋಪಾಲ ಲಮಾಣಿ, ಇತರರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಉಪಸ್ಥಿತರಿದ್ದರು. ಕರೆಪ್ಪ ಕೌಜಲಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net