ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಡೆಗಟ್ಟಿ: ಸಮಿತಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಸೂಚನೆ

23_HSN_01
Published on

ಹಾಸನ: ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ರಚನೆ ಆಗಿರುವ ಸಮಿತಿಗಳು ಕ್ರಿಯಾಶಿಲವಾಗಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪಿಸಿಪಿಎನ್‌ಡಿಟಿ ಸಲಹಾ ಸಮಿತಿ, ತಪಾಸಣೆ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಫಾರಂ-ಎಫ್ ಜಿಲ್ಲಾ ಮಟ್ಟದ ಆಡಿಟ್ ಸಮಿತಿ ರಚನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಮಿತಿಗಳನ್ನು ಪುನಃ ರಚಿಸಲಾಗಿದ್ದು, ಸಾಮಾಜಿಕ ಕಳಕಳಿಯಿಂದ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಎಂದರು.

ಅನಿರೀಕ್ಷಿತ ಭೇಟಿ ನೀಡಿ ಅಕ್ರಮವಾಗಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಕೇಂದ್ರಗಳನ್ನು ಪತ್ತೆಹಚ್ಚಿ ಎಂದು ತಿಳಿಸಿದರಲ್ಲದೆ, ಪರಿಣಾಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ ಎಂದರು.

ಲಿಂಗಾನುಪಾತ ಗಮನಿಸಿದರೆ ಹೆಣ್ಣು ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಸಾಮಾಜಿಕ ಜವಾಬ್ದಾರಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರದೀಪ್ ಕುಮಾರ್, ಡಾ.ಸಾವಿತ್ರಿ, ಡಾ.ರಂಗಲಕ್ಷ್ಮೀ, ಡಾ.ಗಿರಿಜಾ, ವಕೀಲ ರವಿಕುಮಾರ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net