ಮಾರಕ ಕಾಯಿಲೆ ತಡೆಗೆ ಆದ್ಯತೆ

FOGGING
ರೋಣದಲ್ಲಿ ಪುರಸಭೆ ಮುಖ್ಯಾಧಿಕಾರಿ ನೇತೃತ್ವದಲ್ಲಿ ಸೋಮವಾರ ಫಾಗಿಂಗ್ ಮಾಡಲಾಯಿತು. ಸಂಗಪ್ಪ ಜಿಡ್ಡಿಬಾಗಿಲ ಇತರರಿದ್ದರು.
Published on

ರೋಣ: ಡೆಂಗೆ ನಿಯಂತ್ರಣಕ್ಕೆ ವೈದ್ಯರು ಹಾಗೂ ಅಧಿಕಾರಿಗಳು ಆದ್ಯತೆ ನೀಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ತಾಲೂಕಿನಲ್ಲಿ ಡೆಂಗೆ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಇಲ್ಲ ಎನ್ನುವ ಮನೋಭಾವನೆ ಸರಿಯಲ್ಲ. ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಕೈ ಜೋಡಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಸ್ಥಳೀಯ ಜನಪ್ರತಿನಿಧಿಗಳು ಜನರಲ್ಲಿ ಅರಿವು ಮೂಡಿಸಬೇಕು. ತಮ್ಮ ವಾರ್ಡ್‌ಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದರು.

ಪುರಸಭೆ ಅಧ್ಯಕ್ಷೆ ರಂಗವ್ವ ಭಜಂತ್ರಿ, ಉಪಾಧ್ಯಕ್ಷ ಮಿಥುನ್ ಪಾಟೀಲ, ಮುತ್ತಣ್ಣ ಸಂಗಳದ, ಯೂಸೂಫ್ ಇಟಗಿ, ಸಂಗಪ್ಪ ಜಿಡ್ಡಿಬಾಗಿಲ, ದಾವಲಸಾಬ ಬಾಡಿನ್, ಆನಂದ ಚಂಗಳಿ, ಸಂಗು ನವಲಗುಂದ, ಅಪ್ಪು ಗಿರಡ್ಡಿ, ಶಿವು ಹುಲ್ಲೂರ, ಮೌನೇಶ ಹಾದಿಮನಿ ಇತರರು ಇದ್ದರು.

ಡೆಂೆ ನಿಯಂತ್ರಣಕ್ಕಾಗಿ ಸೋಮವಾರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮುಖ್ಯಾಧಿಕಾರಿ ರಮೇಶ ಗೊಂದಕರ ನೇತೃತ್ವದಲ್ಲಿ ಪೌರ ಕಾರ್ಮಿಕರು ಫಾಗಿಂಗ್ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net