ಮಾನವ ಕಳ್ಳ ಸಾಗಾಟ ತಡೆ: ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

Udp_DC
Published on

ವಿಜಯವಾಣಿ ಸುದ್ದಿಜಾಲ ಉಡುಪಿ: ಮಾನವ ಕಳ್ಳ ಸಾಗಾಟ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು. ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುವಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮಾನವ ಕಳ್ಳ ಸಾಗಾಟ ತಡೆ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿ ವಾತನಾಡಿದರು.

ಮಾನವನ ಅಂಗಾಂಗಗಳಿಗೋಸ್ಕರ ಬಡತನದಲ್ಲಿರುವವರಿಗೆ ಆಮಿಷವೊಡ್ಡಿ ಕಳ್ಳ ಸಾಗಾಟ ಕೃತ್ಯಗಳಲ್ಲಿ ತೊಡಗಿಸಲಾಗುತ್ತಿದೆ. ಈ ಬಗ್ಗೆ ಪ್ರಕರಣ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಕಾನೂನು ನೆರವು ಅಭಿರಕ್ಷಕ ರಾಜು ಪೂಜಾರಿ ವಾತನಾಡಿದರು. ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮೊದಲಾದವರು ಭಾಗವಹಿಸಿದ್ದರು.

ಸ್ವಾತಂತ್ರೃ ದಿನಾಚರಣೆ ಸಕಲ ಸಿದ್ಧತೆ

ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಸ್ವಾತಂತ್ರೃ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲ ಅಗತ್ಯ ಸಿದ್ಧತೆ ವಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುವಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಸ್ವಾತ್ರಂತ್ರೊೃೀತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ವಾತನಾಡಿದರು. ಬೆಳಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಲಿದ್ದಾರೆ. ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹರಕ್ಷಕ ದಳ, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪಥ ಸಂಚಲನ ನಡೆಯಲಿದೆ ಎಂದರು. ಎಎಸ್‌ಪಿ ಸಿದ್ದಲಿಂಗಪ್ಪ ಟಿ., ಪೌರಾಯುಕ್ತ ರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net