ಮುಂಜಾಗೃತೆಯಿಂದ ಕ್ಷಯ ರೋಗ ನಿರ್ಮೂಲನೆ

29bhr 1 (1)
Published on

ಬಾಳೆಹೊನ್ನೂರು: ಅಗತ್ಯ ಮುಂಜಾಗ್ರತೆ ಹಾಗೂ ಎಚ್ಚರಿಕೆ ಕ್ರಮಗಳಿಂದ ಕ್ಷಯರೋಗ ಸಂಪೂರ್ಣ ನಿರ್ಮೂಲನೆ ಮಾಡಬಹುದು ಎಂದು ಮಾಗುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜೇಶ್ ಹೇಳಿದರು.

ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಷಯರೋಗದ ವೈರಾಣುಗಳು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯಲ್ಲಿಯೂ ಇರುತ್ತದೆ. ನಮ್ಮ ದೇಹದಲ್ಲಿ ಯಾವಾಗ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಕ್ಷಯರೋಗದ ವೈರಾಣುಗಳು ವೃದ್ಧಿಯಾಗು ಮನುಷ್ಯ ಖಾಯಿಲೆಗೆ ತುತ್ತಾಗುತ್ತಾನೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವ, ಮಾರಣಾಂತಿಕ ಕಾಯಿಲೆಯಾಗಿದ್ದರೂ ಸಹ ನಿರಂತರ ಚಿಕಿತ್ಸೆಯಿಂದ ಇದನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ, ಚಿಕಿತ್ಸೆ ದೊರೆಯುತ್ತದೆ. ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದರು.

ಜೇಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ, ಕಾರ್ಯದರ್ಶಿ ವಿ.ಅಶೋಕ್, ಕಾರ್ಯಕ್ರಮ ನಿರ್ದೇಶಕ ರಾಮ್‌ಪ್ರಸಾದ್, ಪೂರ್ವಾಧ್ಯಕ್ಷ ಸುಧಾಕರ್, ಚೈತನ್ಯ ವೆಂಕಿ, ಸದಸ್ಯರಾದ ನಿಖಿಲ್ ಕಾನ್ಕೆರೆ, ಚಿರಾಗ್, ಸತ್ಯಜಿತ್, ಹಿರಿಯ ಕ್ರೀಡಾಪಟು ಓ.ಡಿ.ಸ್ಟೀನ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net