ದ.ಕ ಜಿಲ್ಲಾಧಿಕಾರಿಯಾಗಿದ್ದ ಎ.ಬಿ.ಇಬ್ರಾಹಿಂ ನಿವೃತ್ತಿ

ibrahim
Published on

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಸಹಿತ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಮೂಲತಃ ಕಾಸರಗೋಡು ಜಿಲ್ಲೆಯ ಅಡೂರಿನವರಾದ ಹಿರಿಯ ಐಎಎಸ್ ಅಧಿಕಾರಿ ಎ.ಬಿ.ಇಬ್ರಾಹಿಂ ಗುರುವಾರ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದಾರೆ.

ಕೆಎಎಸ್ ಅಧಿಕಾರಿಯಾಗಿ ರಾಜ್ಯ ಸರ್ಕಾರಿ ಸೇವೆ ಆರಂಭಿಸಿದ್ದ ಅವರು, ಮೊದಲಿಗೆ ಉಪವಿಭಾಗಾಧಿಕಾರಿಯಾಗಿದ್ದರು. 1996ರಿಂದ 2000ವರೆಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದರು. ವರ್ಗಾವಣೆಗೊಂಡು ಮೈಸೂರು ಮಹಾನಗರ ಪಾಲಿಕೆ ಆಯುಕ್ತ, ಮೈಸೂರು ವಿಶ್ವವಿದ್ಯಾಲಯ ಕುಲಸಚಿವ, ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಐಎಎಸ್‌ಗೆ ಬಡ್ತಿಗೊಂಡು 2013ರ ಡಿಸೆಂಬರ್‌ನಿಂದ 2016ರ ಜುಲೈವರೆಗೆ ದ.ಕ. ಜಿಲ್ಲಾಧಿಕಾರಿಯಾಗಿದ್ದರು. ನಂತರ ಕರ್ನಾಟಕ ಗೃಹಮಂಡಳಿ ಆಯುಕ್ತ, ಕರ್ನಾಟಕ ನಗರ ಮೂಲಸೌಕರ್ಯ ಮಂಡಳಿ ವ್ಯವಸ್ಥಾಪಕ ನಿರ್ದೇಶಕ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net