ಕಾಂಗ್ರೆಸ್‌ನಿಂದ ಬೆಲೆ ಏರಿಕೆ ಗ್ಯಾರಂಟಿ ಜಾರಿ

17Koppa01 (1)
ಪೆಟ್ರೋಲ್, ಡಿಸೇಲ್ ಬೆಲೆಏರಿಕೆ ಆಟೋ ರಿಕ್ಷಾ ಎಳೆಯುವ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ದಿನೇಶ್ ಹೊಸೂರು, ರೇವಂತ್ ಗೌಡ, ಜಯಂತ್ ಇದ್ದರು.
Published on

ಕೊಪ್ಪ: ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡಿಸೇಲ್ ಹಾಗೂ ಇತರ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಬಸ್‌ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ದಿನೇಶ್ ಹೊಸೂರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮೂಲಕ ಜನರಿಗೆ ಆರನೇ ಗ್ಯಾರಂಟಿ ನೀಡಿದೆ. ಐದು ಗ್ಯಾರಂಟಿಗಳಿಗೆ ಹಣವನ್ನು ಸರಿದೂಗಿಸಲು ಬೆಲೆ ಏರಿಕೆ ಎಂಬ ಗ್ಯಾರಂಟಿಯನ್ನು ಜನರ ತಲೆ ಮೇಲೆ ಹಾಕಲು ಸರ್ಕಾರ ಮುಂದಾಗಿದೆ ಎಂದು ದೂರಿದರು.
ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಾಲು, ಪಹಣಿ, ಮುದ್ರಾಂಕ ಶುಲ್ಕ , ವಾಹನ ನೋಂದಣಿ, ಅಬಕಾರಿ ಸುಂಕವನ್ನು ಏರಿಕೆ ಮಾಡಲಾಗಿದೆ. ಅಲ್ಲದೇ ಬಿಜೆಪಿ ಅವಧಿಯಲ್ಲಿ ಜಾರಿಗೊಳಿಸಿದ್ದ ವಿದ್ಯಾಸಿರಿ, ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತಗೊಳಿಸಿದ್ದಾರೆ. ರೈತರಿಗೆ ಉಚಿತವಾಗಿ ನೀಡುತ್ತಿದ್ದ ವಿದ್ಯುತ್ ಟಿಸಿಗೆ ಈಗ 2.5 ಲಕ್ಷ ಹಣ ಕಟ್ಟಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪುಣ್ಯಪಾಲ್ ಮಾತನಾಡಿ, ರಾಜ್ಯದಲ್ಲಿ ಹಿಂದುಗಳನ್ನು ಎರಡನೇ ದರ್ಜೆ ಪ್ರಜೆಯನ್ನಾಗಿ ನೋಡುವ ಸ್ಥಿತಿ ಬಂದಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಪರಾಧ ಪ್ರಕರಣಗಳು ಹೆಚ್ಚಾಗಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net