Onion Price Rise : ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂ.ವರೆಗೆ ಏರಿಕೆ

onion
Published on

ಬೆಂಗಳೂರು:  ( Onion Price Rise ) ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣಿರಿಳಿಸುತ್ತಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂಪಾಯಿ ವರೆಗೆ ಏರಿಕೆಯಾಗಿದೆ.

ಕಳೆದ ತಿಂಗಳು ಬಂದಂತಹ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರು‌ಪಾಲಾಗಿದ್ದು, ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂಪಾಯಿ ವರೆಗೆ ಏರಿಕೆಯಾಗಿದೆ.

ಭಾರಿ ಮಳೆಯ ಪರಿಣಾಮ ನಿರೀಕ್ಷೆಯಷ್ಟು ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ. ಬಂದಂತಹ ಅಲ್ಪಸ್ವಲ್ಪ ಈರುಳ್ಳಿಯ ಗುಣಮಟ್ಟವೂ ಚೆನ್ನಾಗಿಲ್ಲ.‌ ಹೀಗಾಗಿ ಸದ್ಯ ಈರುಳ್ಳಿಯನ್ನು ಮಹಾರಾಷ್ಟದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.‌

ಆದರೆ, ಮಹಾರಾಷ್ಟ್ರದಿಂದಲೂ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ‌ ಪೂರೈಕೆಯಾಗುತ್ತಿಲ್ಲ. ಇದು ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿಗೆ 70 ರಿಂದ 80 ರೂ. ಇದ್ದರೆ, ಸಣ್ಣಪುಟ್ಟ ಅಂಗಡಿಗಳಲ್ಲಿ ಚಿಲ್ಲರೆ ಮಾರಾಟ ದರ 90 ರೂ. ಆಗಿದೆ.‌ ಮುಂದಿನ ದಿನಗಳಲ್ಲಿ 100 ರ ಗಡಿದಾಟುವ ಸಾಧ್ಯತೆಗಳಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net