ವಿಐಎಸ್‌ಎಲ್ ಕನ್ನಡಿಗರ ಹೆಮ್ಮೆ: ಯದುವೀರ್

Mysore MP Yaduveer Krishnadatta Wodeyar press meet
ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಮಾತನಾಡಿದರು.
Published on

ಶಿವಮೊಗ್ಗ: ಭದ್ರಾವತಿ ವಿಐಎಸ್‌ಎಲ್(ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಕಾರ್ಖಾನೆ) ಕನ್ನಡಿಗರ ಹೆಮ್ಮೆಯ ಸಂಸ್ಥೆ. ಅದನ್ನು ಪುನರಾರಂಭಿಸಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಸಂಸ್ಥಾನದ ಆಡಳಿತಾವಧಿಯಲ್ಲಿ ಶುರುವಾಗಿ, ಸಾವಿರಾರು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿದ್ದ ಪ್ರತಿಷ್ಠಿತ ಸಂಸ್ಥೆ ಮುಚ್ಚುವ ಹಂತಕ್ಕೆ ತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈಗಾಗಲೇ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಿಐಎಸ್‌ಎಲ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದು ಕಾರ್ಖಾನೆ ಪುನರಾರಂಭಕ್ಕೆ ಏನೆಲ್ಲಾ ಕ್ರಮಗಳ ಅಗತ್ಯವಿದೆಯೋ ಅದನ್ನು ಕೈಗೊಳ್ಳಲಿದ್ದಾರೆ. ಒಟ್ಟಾರೆಯಾಗಿ ಕಾರ್ಖಾನೆ ಮರು ಸ್ಥಾಪನೆಗೊಂಡು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎಂಬುದು ನಮ್ಮ ಉದ್ದೇಶ. ಅದಕ್ಕೆ ಸಾಧ್ಯವಾದಷ್ಟು ಪ್ರೋತ್ಸಾಹ ನೀಡುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net