ಚೆಟ್ಟಳ್ಳಿಯಲ್ಲಿ ಅರ್ಚಕರ ವಸತಿಗೃಹ ಉದ್ಘಾಟನೆ

Oplus_16908288
ಇತಿಹಾಸ ಪ್ರಸಿದ್ಧ ಚೆಟ್ಟಳ್ಳಿ ಗ್ರಾಮದ ಈರಳೆ ಶ್ರೀ ಭಗವತಿ( ಪೊವ್ವೆದಿ) ದೇವಾಲಯದ ಬಳಿ ನೂತನವಾಗಿ ನಿರ್ಮಿಸಿದ ಅರ್ಚಕರ ವಸತಿಗೃಹವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಎಸ್.ಎಂ.ಚಂಗಪ್ಪ, ಸುನೀತಾ ಮಂಜುನಾಥ್, ಪುತ್ತರಿರ ಪಪ್ಪುತಿಮ್ಮಯ್ಯ, ರವಿ ನಾಣಯ್ಯ ಇದ್ದರು.
Published on

ಸಿದ್ದಾಪುರ: ಇತಿಹಾಸ ಪ್ರಸಿದ್ಧ ಚೆಟ್ಟಳ್ಳಿ ಗ್ರಾಮದ ಈರಳೆ ಶ್ರೀ ಭಗವತಿ( ಪೊವ್ವೆದಿ) ದೇವಾಲಯದ ಬಳಿ ನೂತನವಾಗಿ ನಿರ್ಮಿಸಿದ ಅರ್ಚಕರ ವಸತಿಗೃಹವನ್ನು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಬುಧವಾರ ಉದ್ಘಾಟಿಸಿದರು.

ಬಳಿಕ ಡಾ.ಮಂತರ್‌ಗೌಡ ಮಾತನಾಡಿ, ದೇವಾಲಯದ ಅಭಿವೃದ್ಧಿ ಕಾರ್ಯಕ್ಕೆ ಬದ್ಧ. ಗ್ರಾಮದ ರಸ್ತೆ, ಸೇತುವೆ, ವಿದ್ಯುತ್ ಹಾಗೂ ವಿವಿಧ ಕಾಮಗಾರಿ ಕೈಗೊಳ್ಳುವ ಬಗ್ಗೆ, ಜನರ ಸಮಸ್ಯೆ ಪರಿಹಾರಕ್ಕೆ ಸದಾ ಸಿದ್ಧನಿದ್ದೇನೆ ಎಂದು ತಿಳಿಸಿದರು.

ಈರಳೆ ಶ್ರೀ ಭಗವತಿ ದೇವಿಗೆ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪೊರಿಮಂಡ ದಿನಮಣಿ ಪೂವಯ್ಯ ಸ್ವಾಗತಿಸಿ, ದೇವಾಲಯದ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ದೇವಾಲಯ ಸಮಿತಿ ವತಿಯಿಂದ ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ಇದೇ ಸಂದರ್ಭ ದೇವಾಲಯ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಪೊರಿಮಂಡ ದಿನಮಣಿ ಪೂವಯ್ಯ ಶಾಸಕ ಡಾ.ಮಂತರ್ ಗೌಡ ದೇವಾಲಯದ ಅಭಿವೃದ್ಧಿಗೆ ಶ್ರಮಿಸಿದ ಪೊರಿಮಂಡ ದಿನಮಣಿ ಪೂವಯ್ಯ, ಹಿರಿಯ ರಾಜಕಾರಣಿ ಎಸ್.ಎಂ.ಚಂಗಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಚಂಗಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸುನಿತಾ ಮಂಜುನಾಥ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಪುತ್ತರಿರ ಪಪ್ಪುತಿಮ್ಮಯ್ಯ, ಊರುತಕ್ಕರಾದ ಪೊರಿಮಂಡ ರವಿ ನಾಣಯ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net