ಬೇಡಿಕೆ ಈಡೇರಿಸಿದ್ದರೆ ನಿರಂತರ ಪ್ರತಿಭಟನೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ ಎಚ್ಚರಿಕೆ

Primary School Teachers Association press conference Mandya
Published on

ಮಂಡ್ಯ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿ, ಶಿಕ್ಷಣ ಸಚಿವ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಮಾಡಲಾಗಿದೆ. ಅಂತೆಯೇ ಆ.25ರೊಳಗೆ ಬೇಡಿಕೆ ಈಡೇರಿಸದಿದ್ದರೆ ಹಂತ ಹಂತವಾಗಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ ತಿಳಿಸಿದರು.

2024ರ ಆ.12ರಂದು ಶಿಕ್ಷಕರ ಹೋರಾಟ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ 2024ರ ಸೆ.4ರಂದು ಸಮಿತಿ ರಚಿಸಿ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿ ಇಲ್ಲಿವರೆಗೂ ಭರವಸೆ ಈಡೇರಿಸದೇ ಇರುವುದು ನೋವುಂಟು ಮಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಆ.8ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಹಂತ ಹಂತವಾಗಿ ಹೋರಾಟ ರೂಪಿಸಿದ್ದು, ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮೊದಲ ಹಂತವಾಗಿ ಆ.12ರಂದು ಎಲ್ಲ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ, ಶಿಕ್ಷಣ ಸಚಿವ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿ, ಈಡೇರಿಸದಿದ್ದರೆ ಹೋರಾಟದ ಕುರಿತು ಎಚ್ಚರಿಕೆ ಪತ್ರ ನೀಡಲಾಗಿದೆ ಎಂದು ಹೇಳಿದರು.

ಎರಡನೇ ಹಂತವಾಗಿ ಸೆ.3ರಂದು ಜಿಲ್ಲಾ, ತಾಲೂಕು, ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೂಡಿ ಸಾಂದರ್ಭಿಕ ರಜೆ ಹಾಕಿ ಫ್ರೀಡಂ ಪಾರ್ಕ್ ಚಲೋ ರಾಜ್ಯಮಟ್ಟದ ಬೃಹತ್ ಹೋರಾಟ ಮಾಡಲಾಗುವುದು. ಅದೇ ದಿನ 6 ರಿಂದ 8ನೇ ತರಗಳ ಪಾಠ ಬೋಧನೆ ಬಹಿಷ್ಕಾರ ಮಾಡಲಾಗುವುದು. ಆದಾಗ್ಯೂ ಸರ್ಕಾರದಿಂದ ಯಾವುದೇ ನಿರ್ಣಯ ಹೊರಬಾರದೇ ಹೋದಲ್ಲಿ ಮೂರನೇ ಹಂತವಾಗಿ ಸೆ.4ರಿಂದ 5ರವರೆಗೆ ಅಹೋರಾತ್ರಿ ಧರಣಿ, ನಾಲ್ಕನೇ ಹಂತವಾಗಿ ಸೆ.5ರಂದು ಫ್ರೀಡಂ ಪಾರ್ಕ್‌ನಲ್ಲಿಯೇ ಶಿಕ್ಷಕರ ದಿನಾಚರಣೆ ಮಾಡಲಾಗುವುದು. ಅಂತೆಯೂ ಸ್ಪಂದಿಸದಿದ್ದರೆ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಚಿಕ್ಕೇಗೌಡ, ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಮದ್ದೂರು ತಾಲೂಕು ಅಧ್ಯಕ್ಷ ದೇವರಾಜು, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಲೋಕೇಶ್, ನಾಗಮಂಗಲ ತಾಲೂಕು ಅಧ್ಯಕ್ಷ ಜಿ.ಕೆ.ರುದ್ರೇಶ್, ಪಾಂಡವಪುರ ತಾಲೂಕು ಅಧ್ಯಕ್ಷ ಎಂ.ಡಿ.ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net