ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Prime Minister 15-point implementation meeting on minorities Mandya
Published on

ಮಂಡ್ಯ: ಸರ್ಕಾರದಿಂದ ಅಲ್ಪಸಂಖ್ಯಾತರ ನೀಡಲಾಗುವ ಸೌಲಭ್ಯಗಳನ್ನು ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಅಲ್ಪಸಂಖ್ಯಾತರ 15 ಅಂಶಗಳ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ನೀಡುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ 62 ಅಲ್ಪಸಂಖ್ಯಾತ ಉರ್ದು ಅಂಗನವಾಡಿಗಳಿದ್ದು, ಸುಮಾರು 5,296 ಮಕ್ಕಳ ಹಾಜರಾಗುತ್ತಿದ್ದಾರೆ. ವಿದೇಶಿ ವಿಧ್ಯಾಭ್ಯಾಸ ಅರಿವು ಸಾಲ ಯೋಜನೆಯಡಿ ಜಿಲ್ಲೆಯಲ್ಲಿ ಇಬ್ಬರೂ ಫಲಾನುಭವಿಗಳಿದ್ದಾರೆ. ಶ್ರಮ ಶಕ್ತಿ ಸಾಲ ಯೋಜನೆಯಡಿ 24 ಜನ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 9 ಜನ ಫಲಾನುಭವಿಗಳಿದ್ದಾರೆ ಎಂದು ಮಾಹಿತಿ ತಿಳಿಸಿದರು.

2024-25ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 1 ರಿಂದ 10 ತರಗತಿಯಲ್ಲಿ ಒಟ್ಟು 98,247 ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 2024-25ನೇ ಸಾಲಿನಲ್ಲಿ 8,079 ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗಿದ್ದಾರೆ. ಜಿಲ್ಲೆಯಲ್ಲಿ 56 ಉರ್ದು ಶಾಲೆಗಳಿವೆ. ಸರ್ಕಾರದ ಯೋಜನೆಗಳ ಕುರಿತು ಅಲ್ಪಸಂಖ್ಯಾತರಲ್ಲಿ ಮಾಹಿತಿಯ ಕೊರತೆ ಇದೆ. ಅಧಿಕಾರಿಗಳು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ನೀಡಲಾಗುವ ಯೋಜನೆಗಳನ್ನು ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಧುಶ್ರೀ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net